ವಿಧಾನಸಭಾ ಕ್ಷೇತ್ರದ ಗಣೇಶ ಬ್ಲಾಕ್ ನಲ್ಲಿ ಸಚಿವ ಕೆ.ಗೋಪಾಲಯ್ಯ ಬಿರುಸಿನ ಮತಯಾಚನೆ
ಬೆಂಗಳೂರು: ಏ 29. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಗಣೇಶ ಬ್ಲಾಕ್ ನಲ್ಲಿ ಇಂದು ಬೆಳಗ್ಗೆ, ಮಾನ್ಯ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರು ಮನೆ ಮನೆಗೆ ತೆರಳಿ ಈವರೆಗೆ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಜನಸಾಮಾನ್ಯರಿಗೆ ತಿಳಿಸುವ ಮೂಲಕ ಮತ ಯಾಚನೆ ಮಾಡಿದರು.
ನಂತರದಲ್ಲಿ ಮಾತನಾಡಿದ ಅವರು ಕ್ಷೇತ್ರದದಲ್ಲಿ ಬಿಜೆಪಿಗೆ ಹಾಗೂ ಗೋಪಾಲಯ್ಯನವರಿಗೆ ಮತವನ್ನು ಚಲಾಯಿಸುತ್ತೇವೆ ಎಂದು ಜನಸಾಮಾನ್ಯರು ನಗು ಮುಖದಿಂದ ನನ್ನನು ಸ್ವಾಗತಿಸುತ್ತಿದ್ದಾರೆ ಎಂದು ಹೇಳಿದರು.
ಕೋವಿಡ್ ಸಮಯದಲ್ಲಿ ಕ್ಷೇತ್ರದ ಜನರ ಸಂಕಷ್ಟವನ್ನು ಅರಿತು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಮನೆ ಮನೆಗೆ ಆಹಾರ ಕಿಟ್, ಆರೋಗ್ಯ ಕಿಟ್, ಆಕ್ಸಿಜನ್ ವ್ಯವಸ್ಥೆ, ಲಸಿಕೆ, ಮಾತ್ರೆಗಳು ಹೀಗೆ ಅನೇಕ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
ಇದರ ಜೊತೆಗೆ ಕ್ಷೇತ್ರದಲ್ಲಿ ಆಸ್ಪತ್ರೆಗಳು, ಹೆರಿಗೆ ಆಸ್ಪತ್ರೆ, ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣ, ರಾಣಿ ಅಬ್ಬಕ್ಕ ದೇವಿ ಕ್ರೀಡಾಂಗಣ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಪಾರ್ಕ್, ಶ್ರೀ ಶಿವಕುಮಾರ ಸ್ವಾಮೀಜಿ ಪಾರ್ಕ್, ನವ ನಂದಿನಿ ಪಾರ್ಕ್ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ಶಾಸಕನಾಗಿ ಮತ್ತು ಸಚಿವನಾಗಿ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ಹೇಳಿದರು.
ಬಡವರು, ಮಧ್ಯಮ ವರ್ಗದವರು, ಹಿಂದುಳಿದವರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲರಿಗೂ ಬೇಕಾದಂತ ಸೌಲಭ್ಯಗಳನ್ನು ಕಲ್ಪಿಸಿ ಕ್ಷೇತ್ರದಲ್ಲಿ ನಿರಂತರವಾಗಿ ಸೇವೆ ಸಲ್ಲಿಸಿದ್ದೇನೆ. ಇದರ ಫಲವಾಗಿ ಕ್ಷೇತ್ರದ ಜನರು ಬಿಜೆಪಿಗೆ ಹೆಚ್ಚಿನ ಮತವನ್ನು ನೀಡುತ್ತಾರೆ ಎಂದು ತಿಳಿಸಿದರು.
ಇದೇ ವೇಳೆ ಮಾಜಿ ಶಾಸಕ ನೆಲ ನರೇಂದ್ರ ಬಾಬು, ಡಾಕ್ಟರ್ ಗಿರೀಶ್ ನಾಶಿ, ರೈಲ್ವೆ ನಾರಾಯಣ್, ಅನಂತ್, ಚಂದ್ರದಾಸ್, ವಾರ್ಡ್ ಅಧ್ಯಕ್ಷ ನಾರಾಯಣ್, ಯಶೋದಮ್ಮ, ವಿಜಿ ಕುಮಾರ್ ಸೇರಿದಂತೆ ಬಿಜೆಪಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw