ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಚಿವ ಎಸ್. ಅಂಗಾರ - Mahanayaka

ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಚಿವ ಎಸ್. ಅಂಗಾರ

s angara
12/04/2023

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದಲ್ಲಿ ಸತತ ಆರು ಬಾರಿ ಬಿಜೆಪಿ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದ ಸುಳ್ಯದ ಶಾಸಕ, ಸಚಿವ ಎಸ್. ಅಂಗಾರ ಅವರು ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.


Provided by

ಅವರು ತಮ್ಮ ಮನೆಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ ಇದಲ್ಲ ಎಂದು ಅವರು ಹೇಳಿದ್ದಾರೆ.

ಪ್ರಾಮಾಣಿಕ ರಾಜಕಾರಣಕ್ಕೆ ಇಂದು ಬೆಲೆ ಇಲ್ಲದಂತಾಗಿದೆ. ನನ್ನ ಪ್ರಾಮಾಣಿಕತೆಯೇ ನನಗೆ ಮುಳುವಾಗಿದೆ. ಲಾಬಿ ಮಾಡುವುದು ನನ್ನ ಗುಣವಾಗಿರಲಿಲ್ಲ. ಅದೇ ನನಗೆ ಹಿನ್ನಡೆಯಾಯಿತು. ನಾನು ಇನ್ನು ರಾಜಕಾರಣದಲ್ಲಿಲ್ಲ. ಚುನಾವಣಾ ಪ್ರಚಾರ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು ಎಂದು ಪ್ರತಿಕ್ರಿಯೆ ನೀಡಿದ್ದಾರೆ.


Provided by

ಮೊದಲ ಬಾರಿಗೆ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದ ಸಚಿವ ಎಸ್.ಅಂಗಾರ ಅವರು ಬಳಿಕ ಸತತ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕಳೆದ ಎರಡೂವರೆ ವರ್ಷದಿಂದ ಸಚಿವರಾಗಿದ್ದರು. ಸುಳ್ಯದಲ್ಲಿ ಸೋಲಿಲ್ಲದ ಸರದಾರ ಎಂಬ ಖ್ಯಾತಿ ಪಡೆದಿದ್ದರು. ಆದ್ರೆ ಈ ಸಲ ಅಂಗಾರರ ಬದಲಿಗೆ ಬೇರೆ ಅಭ್ಯರ್ಥಿ ಸೂಚಿಸಬೇಕೆಂಬ ಆಗ್ರಹ ಕೇಳಿಬಂದಿತ್ತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ