ಮೋದಿಯನ್ನು ಕೆಳಗಿಳಿಸಿ ಈ ಇಬ್ಬರನ್ನ ಪ್ರಧಾನಿ ಮಾಡಿ ಎಂದ ಸಚಿವ ಸಂತೋಷ್ ಲಾಡ್!

ಬೆಳಗಾವಿ: ಪ್ರಧಾನಿ ಸ್ಥಾನದಿಂದ ನರೇಂದ್ರ ಮೋದಿ ಅವರನ್ನು ಕೆಳಗಿಳಿಸಿ, ಚಂದ್ರಬಾಬು ನಾಯ್ಡು ಅಥವಾ ನಿತಿನ್ ಗಡ್ಕರಿ ಅವರನ್ನು ಪ್ರಧಾನಿ ಮಾಡಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನನಗಿರುವ ಮಾಹಿತಿಯ ಪ್ರಕಾರ ಪ್ರಧಾನಿ ಬದಲಾಗುತ್ತಾರೆ. ಚಂದ್ರಬಾಬು ನಾಯ್ಡು ಅಥವಾ ನಿತಿನ್ ಗಡ್ಕರಿ ಪೈಕಿ ಒಬ್ಬರು ಪ್ರಧಾನಿಯಾಗುತ್ತಾರೆ ಎಂದು ಅವರು ಹೇಳಿದರು.
ನಾನು ಬಿಜೆಪಿ ನಾಯಕರು, ಕಾರ್ಯಕರ್ತರಲ್ಲಿ ಮನವಿ ಮಾಡುತ್ತೇನೆ, ಮೋದಿಯವರನ್ನು ಕೆಳಗಿಳಿಸಿ ಬೇರೆಯವರನ್ನು ಪ್ರಧಾನಿ ಮಾಡಬೇಕು, ನಿತಿನ್ ಗಡ್ಕರಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಅವರನ್ನೇ ಪ್ರಧಾನಿಯನ್ನಾಗಿ ಮಾಡಿ ಎಂದ ಅವರು, ನಾನೇ ಬುದ್ಧಿವಂತ, ವಿಶ್ವಗುರು ಅಂತಾ ಬಿಜೆಪಿಯವರು ಹೇಳಿದರೆ ಹೇಗೆ ಅಂತ ಪ್ರಶ್ನೆ ಮಾಡಿದ್ರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: