ಪೈಶಾಚಿಕ: ತಂದೆಯ ಸ್ನೇಹಿತರಿಂದಲೇ ಸಹೋದರಿಯರ ಮೇಲೆ ಅತ್ಯಾಚಾರ

31/07/2023

ಇಬ್ಬರು ಹದಿಹರೆಯದ ಸಹೋದರಿಯರ ಮೇಲೆ ತಂದೆಯ ಸ್ನೇಹಿತರೇ ಅತ್ಯಾಚಾರ ಮಾಡಿರುವ ಅಮಾನೀಯ ಕೃತ್ಯ ರಾಜಸ್ಥಾನದಲ್ಲಿ ನಡೆದಿದೆ.

ಹಿರಿಯ ಬಾಲಕಿ ಏಳೂವರೆ ತಿಂಗಳ ಗರ್ಭಿಣಿಯಾಗಿದ್ದು, ಕಿರಿಯ ಬಾಲಕಿ ಎರಡೂವರೆ ತಿಂಗಳ ಗರ್ಭಿಣಿ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜಸ್ಥಾನದ ಅಳ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ಈ ದುಷ್ಕೃತ್ಯ ನಡೆದಿದೆ. ಬಾಲಕಿಯರ ತಂದೆ ಎನ್‌ ಇಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

15 ಮತ್ತು 13 ವರ್ಷದ ತನ್ನ ಹೆಣ್ಣುಮಕ್ಕಳ ಮೇಲೆ ಸಪ್ಪಿ ಮತ್ತು ಸುಭಾನ್ ಅತ್ಯಾಚಾರವೆಸಗಿದ್ದಾರೆ ಎಂದು ದೂರಿದ್ದಾರೆ. ಹಿರಿಯ ಬಾಲಕಿಯು ತನಗೆ ಹೊಟ್ಟೆ ನೋವು ಮತ್ತು ಇತರ ಆರೋಗ್ಯ ಸಮಸ್ಯೆಗಳ ಬಗ್ಗೆ ತನ್ನ ಹೆತ್ತವರ ಬಳಿ ಹೇಳಿಕೊಂಡಿದ್ದಾಳೆ. ಈ ವೇಳೆ ಪೋಷಕರು ಆಕೆಯನ್ನು ವೈದ್ಯರ ಬಳಿಗೆ ಕರೆದೊಯ್ದಾಗ ಆಕೆ ಏಳೂವರೆ ತಿಂಗಳ ಗರ್ಭಿಣಿ ಎಂದು ತಿಳಿದು ಬಂದಿದೆ.

ಈ ಬಗ್ಗೆ ಆಕೆಯನ್ನು ವಿಚಾರಿಸಿದಾಗ ಸಪ್ಪಿ ಮತ್ತು ಸುಭಾನ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ತಿಳಿಸಿದ್ದಾಳೆ. ಅಲ್ಲದೇ ಅವರು ತನ್ನ ತಂಗಿಯ ಮೇಲೂ ಅತ್ಯಾಚಾರವೆಸಗಿದ್ದಾರೆ ಎಂದು ಆಕೆ ಬಹಿರಂಗಪಡಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version