ಮೀನು ಹಿಡಿಯಲು ನದಿಗೆ ಬಲೆ ಹಾಕುತ್ತಿದ್ದಾಗ ಕಾಲು ಜಾರಿ ಬಿದ್ದು ವ್ಯಕ್ತಿ ನೀರುಪಾಲು

02/08/2022
ಗಂಗೊಳ್ಳಿ: ಸೌಪರ್ಣಿಕ ಹೊಳೆಯ ತೀರದಲ್ಲಿ ಮೀನು ಹಿಡಿಯುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ಕೊಚ್ಚಿಕೊಂಡು ಹೋಗಿರುವ ಘಟನೆ ಬೈಂದೂರು ತಾಲೂಕು ಹಡವು ಗ್ರಾಮದ ಅತ್ತಿಕೋಣೆ ಎಂಬಲ್ಲಿ ಆ.1ರಂದು ಸಂಜೆ ವೇಳೆ ನಡೆದಿದೆ.
ನಾಪತ್ತೆಯಾದವರನ್ನು ಹಡವು ತೆಂಕಿನ ಮನೆ ನಿವಾಸಿ ನಾರಾಯಣ ದೇವಾಡಿಗ(55) ಎಂದು ಗುರುತಿಸಲಾಗಿದೆ.
ಮೀನು ಹಿಡಿಯಲು ನದಿಗೆ ಬಲೆ ಹಾಕುತ್ತಿದ್ದಾಗ ಕಾಲು ಜಾರಿ ನದಿಗೆ ಬಿದ್ದು, ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದಾರೆ. ಹುಡುಕಾಡಿದರೂ ಈವರೆಗೂ ಪತ್ತೆಯಾಗಿಲ್ಲ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka