ಹಾಡಹಗಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ | ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಉತ್ತರಪ್ರದೇಶ: ಕಾಲೇಜೊಂದರಲ್ಲಿ ಶಿಕ್ಷಕನೋರ್ವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಉತ್ತರಪ್ರದೇಶ ಮಿರ್ಜಾಪುರದ ಸರ್ಕಾರಿ ಕೈಗಾರಿಕಾ ಸಂಸ್ಥೆಯ ಐಟಿಐ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಲೈಂಗಿಕ ಹಾಡಹಗಲೇ ಲೈಂಗಿಕ ಕಿರುಕುಳ ನೀಡುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಈ ವಿಡಿಯೋ ಹಂಚಿಕೊಂಡಿರುವ ಡಾ. ಅರುಣೇಶ್ ಕುಮಾರ್ ಯಾದವ್ ಅವರು ಉತ್ತರ ಪ್ರದೇಶ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ. ದೂರು ಸ್ವೀಕರಿಸಿದ 24 ಗಂಟೆಗಳ ಒಳಗಾಗಿ ಉತ್ತರ ಪ್ರದೇಶ ಪೊಲೀಸರು ಕಾಮುಕ ಶಿಕ್ಷಕನನ್ನು ಬಂಧಿಸಿದ್ದಾರೆ.
ಹೋಳಿ ಹಬ್ಬ ಆಚರಣೆಯ ಸಂದರ್ಭದಲ್ಲಿ ಶಿಕ್ಷಕ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಮಿರ್ಜಾಪುರದ ಎಸ್ಪಿ ಸಂತೋಷ್ ಮಿಶ್ರಾ ಹೇಳಿಕೆ ನೀಡಿದ್ದಾರೆ.
https://twitter.com/YadavArunesh/status/1651442165753733120?s=20
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw