ನಿಧಿಗಾಗಿ 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ದುಷ್ಕರ್ಮಿಗಳು
ಚಿಕ್ಕಮಗಳೂರು: ನಿಧಿಗಾಗಿ ದುಷ್ಕರ್ಮಿಗಳು 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ಘಟನೆ ಚಿಕ್ಕಮಗಳೂರು ತಾಲೂಕಿನ ಆಣೂರು ಸಮೀಪದ ಕೆಸರಿಕೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿರ್ಜನ ಪ್ರದೇಶದಲ್ಲಿ ನಿಧಿಗಾಗಿ ಶೋಧ ನಡೆಸಲಾಗಿದೆ. 25 ಅಡಿಯಷ್ಟು ಆಳದ ಗುಂಡಿ ತೋಡಿ ನಿಧಿಗಾಗಿ ಶೋಧ ನಡೆಸಲಾಗಿದೆ. ಗ್ರಾಮದಲ್ಲಿ ನಿಧಿಗಾಗಿ ಶೋಧ ನಡೆದ ಹಿನ್ನೆಲೆ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಮಧ್ಯರಾತ್ರಿಯಲ್ಲಿ ಕಿಡಿಗೇಡಿಗಳು ಪೂಜೆ ಮಾಡಿದ್ದು, ನಿರ್ಜನ ಪ್ರದೇಶದಲ್ಲಿ ಬೆಳಕು ಕಂಡು ಗ್ರಾಮಸ್ಥರು ಸ್ಥಳಕ್ಕೆ ತೆರಳಿದ್ದಾರೆ. ಗ್ರಾಮಸ್ಥರು ಸ್ಥಳಕ್ಕೆ ಬರುತ್ತಿದ್ದಂತೆ ಕಿಡಿಗೇಡಿಗಳು ಎಸ್ಕೇಪ್ ಆಗಿದ್ದಾರೆ. ನಿಧಿಗಾಗಿ ಶೋಧ ನಡೆಸಿದ ಸ್ಥಳದಲ್ಲಿ ಅರಿಶಿಣ-ಕುಂಕುಮ, ಕುಂಬಳಕಾಯಿ, ಕೋಳಿ, ಕಾಯಿ, ಸೇರಿ ವಿವಿಧ ವಸ್ತುಗಳು ಪತ್ತೆಯಾಗಿವೆ.
ನಿಧಿ ಶೋಧದ ತಂಡ ಉಡುಪಿ ನೋಂದಣಿ ಸಂಖ್ಯೆ ಇರುವ ಎರಡು ಕಾರಿನಲ್ಲಿ ಬಂದಿದ್ದರು. ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗ್ರಾಮದಲ್ಲಿ ನಿಧಿಗಾಗಿ ಪೂಜೆ ನಡೆಸಲಾಗಿದೆ ಅನ್ನೋ ಸುದ್ದಿ ಕೇಳುತ್ತಿದ್ದಂತೆಯೇ ಗ್ರಾಮಸ್ಥರು ಭಯಭೀತರಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw