ಯುವತಿ ನಾಪತ್ತೆ: ಮಾಹಿತಿ ನೀಡಲು ಸಾರ್ವಜನಿಕರಿಗೆ ಮನವಿ
03/09/2023
ಉಡುಪಿ: ಉಡುಪಿ ತಾಲೂಕು ಬಡಗುಬೆಟ್ಟು ಗ್ರಾಮದ ಮಂಚಿಕೋಡಿ ನಿವಾಸಿ ವೈಷ್ಣವಿ ನಾಯಕ್ (18) ಎಂಬ ಯುವತಿಯು ಸೆಪ್ಟಂಬರ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ ಎತ್ತರ, ಸಪೂರ ಶರೀರ, ಬಿಳಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ಇಂಗ್ಲೀಷ್, ಹಿಂದಿ, ತುಳು ಹಾಗೂ ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ