ಶಾಸಕರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ: ಆರೋಪಿ ಪೊಲೀಸ್ ವಶಕ್ಕೆ - Mahanayaka

ಶಾಸಕರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಮಾನ: ಆರೋಪಿ ಪೊಲೀಸ್ ವಶಕ್ಕೆ

arrest
03/11/2022

ಸಾಮಾಜಿಕ ಜಾಲತಾಣದಲ್ಲಿ ಎಡಿಟ್ ಮಾಡಿದ ಫೋಟೋ ಹಾಕಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಅವರಿಗೆ ಅವಮಾನ ಮಾಡಿರುವ ಆರೋಪದಲ್ಲಿ ಆರೋಪಿ ಸತೀಶ್ ಶೆಟ್ಟಿ ಹಡಾಳಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸತೀಶ್ ಶೆಟ್ಟಿ ಬಿಜೆಪಿ ಕಾರ್ಯಕರ್ತರಾಗಿದ್ದು, ಅಂಪಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದಾರೆ. ಬಿಜೆಪಿ ಪಕ್ಷದಲ್ಲಿ ಶಾಸಕ ಸುಕುಮಾರ್ ಶೆಟ್ಟಿ ಅವರ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿದ್ದರು.

ಶಾಸಕ ಸುಕುಮಾರ್ ಶೆಟ್ಟಿ ಅವರು ಬೈಂದೂರಿನಲ್ಲಿ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಶುಭಕೋರಿ ಹಾಕಿದ್ದ ಫೋಟೋದಲ್ಲಿ ಶಾಸಕರ ಮುಖಕ್ಕೆ ಗೀಚಿ, ತಲೆಯ ಮೇಲೆ ಶೂ ಚಿತ್ರ ಅಂಟಿಸಿ ತನ್ನ ವಾಟ್ಸ್ಯಾಪ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದರು.

ಈ ಬಗ್ಗೆ ಉಮೇಶ್ ಶೆಟ್ಟಿ ಕಲ್ಗದ್ಧೆ ಎಂಬವರು ಶಂಕರನಾರಾಯಣ ಠಾಣೆಗೆ ಶಾಸಕರಿಗೆ ಅವಮಾನ, ಶಾಸಕರ ಬಗ್ಗೆ ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ ಹಾಗೂ ಪಕ್ಷಗಳ ಕಾರ್ಯಕರ್ತರಲ್ಲಿ ವೈಮಸ್ಸಿನ ಮೂಡಿಸುವ ಉದ್ಧೇಶದಿಂದ ಸತೀಶ್ ಶೆಟ್ಟಿ ಅವರು ಈ ಕೃತ್ಯ ಎಸಗಿದ್ದಾರೆ ಎಂದು ದೂರು ನೀಡಿದ್ದರು. ಈ ಹಿನ್ನೆ ಲೆಯಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


ಚರಂಡಿಗೆ ಬಿದ್ದ ಬೈಕ್: ಸವಾರ ಮೃತ್ಯು

ಕಾರ್ಕಳ: ಬೈಕ್ ವೊಂದು ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಸಬಾ ಗ್ರಾಮದ ಕೃಷ್ಣಗಿರಿ ಕ್ರಾಸ್ ಬಳಿ ನ.2ರಂದು ಮಧ್ಯಾಹ್ನ ನಡೆದಿದೆ.

ಮೃತರನ್ನು ಸುಬ್ರಹ್ಮಣ್ಯ(46) ಎಂದು ಗುರುತಿಸಲಾಗಿದೆ. ಇವರು ನಿನ್ನೆ ಮಧ್ಯಾಹ್ನ ತನ್ನ ಸ್ಕೂಟರ್ ನಲ್ಲಿ ನಕ್ರೆ ಜಂಕ್ಷನ್‌ ಕಡೆಗೆ ಬರುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಎಡಬದಿಯಲ್ಲಿರುವ ಚರಂಡಿಗೆ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದರು.

ಕೂಡಲೇ ಅವರನ್ನು ಕಾರ್ಕಳ ಟಿ.ಎಂ.ಎ. ಪೈ ಆಸ್ಪತ್ರೆಗೆ ದಾಖಲಿಸಿದ್ದು ಅನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸುಬ್ರಹ್ಮಣ್ಯ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ. ಕಾರ್ಕಳ ನಗರ ಪೊಲೀಸ್ ಪ್ರಕರಣದಾಖಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ