ಡೆಪ್ಯುಟಿ ಸ್ಪೀಕರ್ ಹುದ್ದೆ ತಿರಸ್ಕರಿಸಿದ ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಡೆಪ್ಯುಟಿ ಸ್ಪೀಕರ್ ಸ್ಥಾನ ನನಗೆ ಬೇಡ, ಶಾಸಕನಾಗಿಯೇ ಮುಂದುವರಿಯುತ್ತೇನೆ ಎನ್ನುವ ಮೂಲಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ತಿರಸ್ಕರಿಸಿದ್ದಾರೆ.
ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ, ಈ ಮೊದಲು ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ಕೊನೆ ಗಳಿಗೆಯಲ್ಲಿ ಕೈ ತಪ್ಪಿದೆ. ಇದಕ್ಕೆ ಕಾರಣ ಏನೆಂದು ಗೊತ್ತಿಲ್ಲ. ಸಚಿವ ಸ್ಥಾನ ನೀಡದ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ಡೆಪ್ಯುಟಿ ಸ್ಪೀಕರ್ ಸ್ಥಾನ ನೀಡಿದೆ. ಆ ಹುದ್ದೆ ನನಗೆ ಬೇಡ. ಡೆಪ್ಯುಟಿ ಸ್ಪೀಕರ್ ಸ್ಥಾನ ಕಾರ್ಯಭಾರದ ಒತ್ತಡದಿಂದ ಕ್ಷೇತ್ರದ ಕೆಲಸ ಮಾಡಲು ಕಷ್ಟವಾಗುತ್ತದೆ ಎಂದರು.
ಡೆಪ್ಯುಟಿ ಸ್ಪೀಕರ್ ಆದರೆ ಕ್ಷೇತ್ರದ ಜನರ ಕೈಗೆಟುಕುವುದಿಲ್ಲ ಹಾಗಾಗಿ ಡೆಪ್ಯುಟಿ ಸ್ಪೀಕರ್ ಸ್ಥಾನ ಬೇಡ ಎಂಬುದು ಕ್ಷೇತ್ರದ ಮತದಾರರು ಹಾಗು ಬೆಂಬಲಿಗರ ಒತ್ತಾಯವಾಗಿದೆ. ನಾನು ಉಪ್ಪಾರ ಸಮಾಜದ ಏಕೈಕ ಶಾಸಕ. ಯಾವಾಗಲು ಜನರ ಜೊತೆ ಬೆರೆತು ಕೆಲಸ ಮಾಡುವವನು. ಡೆಪ್ಯುಟಿ ಸ್ಪೀಕರ್ ಸ್ಥಾನ ಒಪ್ಪಿಕೊಳ್ಳುವಂತೆ ಸಿದ್ದರಾಮಯ್ಯ ಹಾಗು ಜಮೀರ್ ಅಹಮದ್ ನನಗೆ ಒತ್ತಾಯಿಸಿದ್ದರು ಎಂದು ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw