ಚಿಕ್ಕಮಗಳೂರು ನಗರದಲ್ಲಿ ಮನೆ ಮನೆಗಳಿಗೆ ತೆರಳಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ
ಚಿಕ್ಕಮಗಳೂರು: ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ ನಡೆಸಿದರು.
ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಗಳಲ್ಲಿ ಸಿ.ಟಿ.ರವಿ ನೇತೃತ್ವದಲ್ಲಿ ಭಿಕ್ಷಾಟನೆ ನಡೆಯಿತು. ಮಾಲಾಧಾರಿಗಳಿಂದ ಪಡಿಸಂಗ್ರಹ ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ –ಬೆಲ್ಲವನ್ನು ಸಾರ್ವಜನಿಕರು ಭಿಕ್ಷೆ ನೀಡಿದರು.
ಇಂದು ಭಿಕ್ಷೆಯಾಗಿ ಪಡೆದ ವಸ್ತುಗಳನ್ನು ನಾಳೆ ನಾಳೆ ಈರುಮುಡಿ ರೂಪದಲ್ಲಿ ದತ್ತಾತ್ರೇಯ ಸ್ವಾಮಿಗೆ ಅರ್ಪಣೆ ಮಾಡಲಾಗುವುದು. ನಾಳೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಜಯಂತಿ ನಡೆಯಲಿದೆ.
ಇನ್ನೂ ದತ್ತಜಯಂತಿಯಂತಿ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ನಗರದಲ್ಲಿ 30 ಸಾವಿರ ಭಕ್ತರಿಂದ ಬೃಹತ್ ಶೋಭಾಯಾತ್ರೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಜಿಲ್ಲಾದ್ಯಂತ ಮುನ್ನೆಚ್ಚರಿಕೆ ವಹಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka