ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ತಲವಾರು ಝಳಪಿಸಿದ ದುಷ್ಕರ್ಮಿಗಳು! - Mahanayaka

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ತಲವಾರು ಝಳಪಿಸಿದ ದುಷ್ಕರ್ಮಿಗಳು!

harish poonja
14/10/2022

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು  ಫರಂಗಿಪೇಟೆ ಎಂಬಲ್ಲಿ ಕಳೆದ ರಾತ್ರಿ  ಅಡ್ಡಗಟ್ಟಿದ ದುಷ್ಕರ್ಮಿಗಳು ತಲವಾರು ಝಳಪಿಸಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.


Provided by

ಶಾಸಕ ಹರೀಶ್ ಪೂಂಜಾರ ಕಾರು ಚಾಲಕ ನವೀನ್ ಎಂಬುವವರು ಈ ಬಗ್ಗೆ ದೂರು ನೀಡಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ ಹರೀಶ್ ಪೂಂಜಾ ಮಂಗಳೂರಿನಿಂದ ಬೆಳ್ತಂಗಡಿಗೆ ರಾತ್ರಿ ತೆರಳುತ್ತಿದ್ದಾಗ ಬಿಳಿ ಸ್ಕಾರ್ಪಿಯೊ ಕಾರಿನಲ್ಲಿ ಪಡೀಲ್ ನಿಂದ ಫರಂಗಿಪೇಟೆ ವರೆಗೆ ಶಾಸಕರ ಕಾರನ್ನು ಬೆನ್ನತ್ತಿದ ದುಷ್ಕರ್ಮಿಗಳ ತಂಡ ತಲವಾರು ತೋರಿಸಿ ಅಡ್ಡಗಟ್ಟಲು ಪ್ರಯತ್ನಿಸಿದೆ ಎನ್ನಲಾಗಿದೆ.

ಈ ಸಂದರ್ಭ ಫರಂಗಿಪೇಟೆಯಲ್ಲಿ ಚಾಲಕ ಕಾರನ್ನು ಬದಿಗೆ ಸರಿಸಿ ನಿಲ್ಲಿಸಿದ ಸಂದರ್ಭದಲ್ಲಿ ಅವಾಚ್ಯವಾಗಿ ನಿಂದಿಸಿದ ತಂಡ ತಲವಾರು ಝಳಪಿಸಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


Provided by

ಘಟನೆ ನಡೆದ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ ಕಾರಿನಲ್ಲಿ ಪ್ರಯಾಣಿಸುತ್ತಿರಲಿಲ್ಲ. ಅವರು ಸಂಬಂಧಿಕರೊಬ್ಬರ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ