ಲೋಕಾಯುಕ್ತ ದಾಳಿ ಕೇಸ್ : ಶಾಸಕ ಮಾಡಾಳ್ ಪುತ್ರ ಪ್ರಶಾಂತ್ ಸೇರಿ ಐವರು 14ದಿನ ನ್ಯಾಯಾಂಗ ಬಂಧನಕ್ಕೆ
ಬೆಂಗಳೂರು: ನಿನ್ನೆ 40 ಲಕ್ಷ ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧ ವಿಧಿಸಲಾಗಿದೆ.
ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಶಾಂತ್ ಮಾಡಾಳ್ ಸೇರಿ ಐವರನ್ನ ಲೋಕಾಯುಕ್ತ ಅಧಿಕಾರಿಗಳು ಲೋಕಾಯುಕ್ತ ನ್ಯಾಯಾಲಯಕ್ಕೆ ಬೆಳಿಗ್ಗೆ ಹಾಜರುಪಡಿಸಿದ್ದರು. ಇದೀಗ ಪ್ರಶಾಂತ್ ಮಡಾಳ್ ಸೇರಿ ಐವರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಿ ಕೋರ್ಟ್ ಆದೇಶಿಸಿದೆ.
ಲೋಕಾಯುಕ್ತ ಅಧಿಕಾರಿಗಳು ಪ್ರಶಾಂತ್ ಮನೆ ಮತ್ತು ಕಚೇರಿಯಿಂದ ಇದುವರೆಗೆ ರೂ. 7.62 ಕೋಟಿ ವಶಪಡಿಸಿಕೊಂಡಿದ್ದಾರೆ. ಪ್ರಶಾಂತ್, ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಒಬ್ಬ ಅಧಿಕಾರಿಯಾಗಿದ್ದು ನಿಯೋಜನೆ ಮೇರೆಗೆ ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ನಿನ್ನೆ ಸಂಜೆ ಅವರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ (ಕೆಎಸ್ ಡಿಎಲ್) (KSDL) ಕೆಮಿಕಲ್ ಪೂರೈಸುವ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಗುತ್ತಿಗೆಗದಾರರಿಗೆ ಕಾರ್ಯಾದೇಶ ನೀಡಲು ಲಂಚದ ರೂಪದಲ್ಲಿ ರೂ. 40 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw