ಬಿಜೆಪಿ ಶಾಸಕ ರಘು ವಿರುದ್ಧ ಕೊರೊನಾ ಲಸಿಕೆ ದುರ್ಬಳಕೆ ಆರೋಪ | ಸಚಿವ ಸುಧಾಕರ್  ಏನಂದ್ರು? - Mahanayaka
8:57 AM Thursday 12 - December 2024

ಬಿಜೆಪಿ ಶಾಸಕ ರಘು ವಿರುದ್ಧ ಕೊರೊನಾ ಲಸಿಕೆ ದುರ್ಬಳಕೆ ಆರೋಪ | ಸಚಿವ ಸುಧಾಕರ್  ಏನಂದ್ರು?

sudhakar k
02/06/2021

ಬೆಂಗಳೂರು: ಸಿ.ವಿ.ರಾಮನ್ ನಗರ ಕ್ಷೇತ್ರ ಬಿಜೆಪಿ ಶಾಸಕರಾಗಿರುವ ಎಸ್.ರಘು ಅವರ ವಿರುದ್ಧ ಕೊರೊನಾ ಲಸಿಕೆ ದುರ್ಬಳಕೆ ಆರೋಪ ಕೇಳಿ ಬಂದಿದ್ದು,  ಈ ಪ್ರಕರಣ ಸಂಬಂಧ ಸೂಕ್ತ ಕ್ರಮಕೈಗೊಳ್ಳುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಭುವನೇಶ್ವರಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ಲಸಿಕಾ ಕಾರ್ಯಕ್ರಮವನ್ನು ರದ್ದುಗೊಳಿಸಿ, ಸಮೀಪದ ಕಲ್ಯಾಣ ಮಂಟಪವೊಂದರಲ್ಲಿ ಶಾಸಕ ರಘು ಅವರು ತಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಸಂಬಂಧಿಕರಿಗೆ ಲಸಿಕೆ ನೀಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಸಾರ್ಜಜನಿಕ ಪ್ರದೇಶಗಳಲ್ಲಿ, ಕಲ್ಯಾಣ ಮಂಟಪಗಳಲ್ಲಿ ಲಸಿಕೆ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೀಡಲಾಗುತ್ತಿರುವ ಲಸಿಕೆಗಳನ್ನು ಆದ್ಯತೆಯ ಆಧಾರದ ಮೇಲೆ ಜನರಿಗೆ ನೀಡಬೇಕು. ಘಟನೆ ಕುರಿತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರೊಂದಿಗೆ ಮಾತುಕತೆ ನಡೆಸುತ್ತೇನೆ. ಒಂದು ವೇಳೆ ತಪ್ಪುಗಳಾಗಿರುವುದು ಕಂಡು ಬಂದರೆ ಸೂಕ್ತ ಕ್ರಮವನ್ನು ಜರಗಿಸುವುದಾಗಿ ಸಚಿವರು ಹೇಳಿದರು.

ಇತ್ತೀಚಿನ ಸುದ್ದಿ