ಪೌರಕಾರ್ಮಿಕರೊಂದಿಗೆ ಹುಟ್ಟುಹಬ್ಬ ಆಚರಿಸಿದ ಶಾಸಕ ರಘುಪತಿ ಭಟ್
ಉಡುಪಿ ನಗರಸಭೆಯ ಸ್ವಚ್ಛತೆಯ ನೈಜ ರಾಯಭಾರಿಗಳಾದ ಪೌರ ಕಾರ್ಮಿಕರೊಂದಿಗೆ ಶಾಸಕ ಕೆ. ರಘುಪತಿ ಭಟ್ ಇಂದು ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ತಮ್ಮ ಜನ್ಮದಿನಾಚರಣೆ ಆಚರಿಸಿ ಅವರೊಂದಿಗೆ ಭೋಜನ ಸವಿದರು.
ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್.ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಜಿಲ್ಲಾ ಬಿಜೆಪಿ ವಕ್ತಾರರಾದ ರಾಘವೇಂದ್ರ ಕಿಣಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ಸ್ಥಳೀಯ ನಗರಸಭಾ ಸದಸ್ಯರಾದ ವಿಜಯಲಕ್ಷ್ಮಿ ಮತ್ತು ನಗರ ಸಭೆಯ ಸದಸ್ಯರು, ನಗರ ಸಭೆಯ ಪರಿಸರ ಇಲಾಖೆಯ ಸ್ನೇಹಾ ಹಾಗೂ ಶಾಸಕರ ಧರ್ಮಪತ್ನಿ ಶಿಲ್ಪಾ ಆರ್. ಭಟ್, ಮಗನಾದ ರೋಹನ್, ರೆಯ್ಯಾನ್ಶ್ ಜೊತೆಗಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw