ಭೇಟಿಗೆ ಅವಕಾಶ ನೀಡಿರಲಿಲ್ಲ ಅದಕ್ಕಾಗಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದೆವು ಎಂದ ಆರೋಪಿಗಳು - Mahanayaka
6:17 PM Wednesday 5 - February 2025

ಭೇಟಿಗೆ ಅವಕಾಶ ನೀಡಿರಲಿಲ್ಲ ಅದಕ್ಕಾಗಿ ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದೆವು ಎಂದ ಆರೋಪಿಗಳು

mla sathish reddy car
14/08/2021

ಬೆಂಗಳೂರು:  ಕೆಲಸಕ್ಕಾಗಿ ಹಲವು ಬಾರಿ ಭೇಟಿಯಾಗಲು ಯತ್ನಿಸಿದ್ದೆ. ಆದರೂ ಶಾಸಕರ ಭೇಟಿಗೆ ಅವಕಾಶ ನೀಡಿಲ್ಲ. ಹಾಗಾಗಿ ಕಾರಿಗೆ ಬೆಂಕಿ ಹಚ್ಚಿದ್ದೆ ಎಂದು ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಹಚ್ಚಿದ ಆರೋಪಿ ವಿಚಾರಣೆಯ ವೇಳೆ ತಿಳಿಸಿದ್ದಾನೆ ಎಂದು ತಿಳಿದು ಬಂದಿದೆ.

ಬೊಮ್ಮನಹಳ್ಳಿ ಬಿಜೆಪಿ ಶಾಸಕರಾಗಿರುವ ಸತೀಶ್ ರೆಡ್ಡಿ ಅವರ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಬಂಧಿತರಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ ಎಂದು ಕೂಡ ವರದಿಯಾಗಿದೆ.

ಬೆಂಗಳೂರಿನ ಶ್ರೀಧರ್ ಗೌಡ ಮತ್ತು ನವೀನ್ ಕಾಳಪ್ಪ ಹಾಗೂ ಕೇರಳ ಮೂಲದ ಸಾಗರ್ ಥಾಪ ಬಂಧಿತ ಆರೋಪಿಗಳಾಗಿದ್ದಾರೆ ಎಂದು ವರದಿಯಾಗಿದೆ. ಕೆಲಸಕ್ಕಾಗಿ ಹಲವು ಬಾರಿ ಭೇಟಿಯಾಗಲು ಯತ್ನಿಸಿದ್ದೆ. ಆದರೂ ಶಾಸಕರ ಭೇಟಿಗೆ ಅವಕಾಶ ನೀಡಿಲ್ಲ. ಹಾಗಾಗಿ ಕಾರಿಗೆ ಬೆಂಕಿ ಹಚ್ಚಿದ್ದೆ. ದೊಡ್ಡ ವ್ಯಕ್ತಿಯ ಕಾರಿಗೆ ಬೆಂಕಿ ಹಚ್ಚಿದರೆ ಭಯ ಹುಟ್ಟಿಸಬಹುದು ಎಂದು ವಿಚಾರಣೆ ವೇಳೆ ಆರೋಪಿಗಳು ಬಾಯಿಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

ಇನ್ನೂ ಆರೋಪಿಗಳ ಬಂಧನದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸತೀಶ್ ರೆಡ್ಡಿ, – ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವವರು ಕೇವಲ ಪಾತ್ರಧಾರಿಗಳಷ್ಟೆ. ಇವರ ಹಿಂದಿನ ಸೂತ್ರಧಾರಿ ಬೇರೆಯೇ ಇದ್ದಾರೆ. ತನಿಖೆ ನಂತರ ಎಲ್ಲ ವಿಚಾರ ಹೊರಬರಲಿದೆ. ಬಂಧಿತ ಆರೋಪಿಗಳು ನೀಡಿರುವ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಇನ್ನೂ ಕೇಬಲ್ ಮಾಫಿಯಾ ಕೈವಾಡದ ಬಗ್ಗೆಯೂ ಶಂಕೆ ಇದೆ. ಇದನ್ನು ನಾನು ಪ್ರಸ್ತುತ ಸಂದರ್ಭದಲ್ಲಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಗೃಹ ಸಚಿವರಿಗೆ ನೇರವಾಗಿ ತಿಳಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಳು…

ಮಕ್ಕಳಾಗುತ್ತಿಲ್ಲ, ಪರಿಹಾರ ತಿಳಿಸಿ ಎಂದು ಬಂದ ಮಹಿಳೆಯನ್ನು ಮಂಚಕ್ಕೆ ಕರೆದ ಮಾಟಗಾರ!

ಕಾರ್ಯಕ್ರಮದ ವೇದಿಕೆಯಲ್ಲಿಯೇ ಬೈದಾಡಿಕೊಂಡು ಹೊಡೆದಾಟಕ್ಕೆ ನಿಂತ ಶಾಸಕ-ಸಂಸದ!

ವಾಜಪೇಯಿ ಮದ್ಯ, ಮಾಂಸ ಪ್ರಿಯರು, ಸಾರ್ವರ್ಕರ್ ಬಾರ್ ಎಂದು ಹೆಸರಿಡುತ್ತಾರೆಯೇ? | ಸಿ.ಟಿ.ರವಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬಿಜೆಪಿ ಕಾರ್ಯಕರ್ತ ಸೇರಿದಂತೆ ಇಬ್ಬರಿಂದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ!

ಜಿಯೋ ಫೋನ್ ಸ್ಫೋಟ: ಪ್ಯಾಂಟ್ ನ ಜೇಬಿನಲ್ಲಿದ್ದಾಗಲೇ ಏಕಾಏಕಿ ಸಿಡಿದ ಮೊಬೈಲ್

ಇತ್ತೀಚಿನ ಸುದ್ದಿ