ಪ್ರಾಣಿಗಳಿಗೂ ಬದುಕುವ ಹಕ್ಕಿದೆ: ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ತೆರವು ವಿರೋಧಿಸಿ ಪಾದಯಾತ್ರೆ

ಚಾಮರಾಜನಗರ: ಬಂಡೀಪುರ ಅಭಯಾರಣ್ಯದ ಪ್ರಾಣಿಗಳು ರಾತ್ರಿ ವೇಳೆ ವಾಹನಗಳಿಗೆ ಸಿಲುಕಿ ಸಾವನ್ನಪ್ಪುತ್ತಿವೆ. ಹೀಗಾಗಿ 2009 ರಲ್ಲಿ ರಾತ್ರಿ ವಾಹನ ಸಂಚಾರ ನಿಷೇಧಿಸಿ ಆದೇಶಿಸಲಾಗಿತ್ತು. ಇದರಿಂದಾಗಿ ರಾತ್ರಿ ವೇಳೆ ತಮಿಳುನಾಡು ಹಾಗೂ ಕೇರಳ ರಾಜ್ಯಗಳಿಗೆ ಎರಡು ರಾಷ್ಟ್ರೀಯ ಹೆದ್ದಾರಿಗಳ ಪ್ರಯಾಣ ನಿಷೇಧ ಹೇರಲಾಗಿತ್ತು.
ಇದೀಗ ರಾತ್ರಿ ವಾಹನ ಸಂಚಾರ ನಿಷೇಧ ತೆರವುಗೊಳಿಸಲು ಯತ್ನ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಜನ, ಪರಿಸರ ಪ್ರೇಮಿಗಳು ಬೀದಿಗಿಳಿದಿದ್ದಾರೆ. ಬಂಡೀಪುರ ಉಳಿಸಿ ಅಭಿಯಾನ ಆರಂಭಿಸಿದ್ದಾರೆ.
ರಾತ್ರಿ ಸಂಚಾರ ನಿಷೇಧ ತೆರವುಗೊಳಿಸುವಂತೆ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರ ಒತ್ತಡದ ಮೇರೆಗೆ ನಿಷೇಧ ತೆರವಿಗೆ ಸರ್ಕಾರ ಯತ್ನಿಸುತ್ತಿದೆ, ಇತ್ತೀಚಿಗೆ ಈ ಬಗ್ಗೆ ಅರಣ್ಯ ಸಚಿವ ಈಶ್ವರಖಂಡ್ರೆ ಅರಣ್ಯ ಇಲಾಖೆಯ ಹಿರಿಯ ಅಧಿಕಾರೊಗಳೊಡನೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚರ್ಚೆ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ನಮ್ಮ ನಡಿಗೆ ಬಂಡೀಪುರ ಕಡೆಗೆ ಎಂಬ ಘೋಷಣೆಯೊಂದಿಗೆ ಭಾನುವಾರ ಪಾದಯಾತ್ರೆ ನಡೆಸಲಾಯಿತು. ಗುಂಡ್ಲುಪೇಟೆ ತಾಲೂಕು ಕಗ್ಗಳದ ಹುಂಡಿಯಿಂದ ಮದ್ದೂರು ಚೆಕ್ ಪೋಸ್ಟ್ ವರೆಗೆ ಪಾದಯಾತ್ರೆ ನಡೆಯಿತು. ಪಾದಯಾತ್ರೆಯಲ್ಲಿ ಪರಿಸರವಾದಿಗಳು, ವನ್ಯಜೀವಿ ಪ್ರೇಮಿಗಳು, ರೈತರು, ಐಟಿ ಬಿಟಿ ನೌಕರರು, ನಿವೃತ್ತ ಅರಣ್ಯಾಧಿಕಾರಿಗಳು ಹೀಗೆ ಎಲ್ಲ ವರ್ಗದ ನೂರಾರು ಮಂದಿ ಭಾಗವಹಿಸಿದ್ದರು.
ಚೆಕ್ಪೋಸ್ಟ್ ಬಳಿ ನಡೆದ ಸಮಾವೇಶದ ಸ್ಥಳಕ್ಕೆ ಗುಂಡ್ಲುಪೇಟೆ ಕಾಂಗ್ರೆಸ್ ಶಾಸಕ ಗಣೇಶ್ ಪ್ರಸಾದ್ ಭೇಟಿ ನೀಡಿದ್ದರು. ರಾತ್ರಿ ವಾಹನ ಸಂಚಾರ ನಿಷೇಧ ತೆರವು ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ, ಯಾರೂ ಸಹ ಆತಂಕಪಡುವ ಅಗತ್ಯ ಇಲ್ಲ ಎಂದು ತಿಳಿಸಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: