10:45 AM Wednesday 12 - March 2025

ಪೊಲೀಸರನ್ನು ದೂಡಿ ಹಾಕಿ ಓಡಿ ಹೋಗಿದ್ದ ಮೊಬೈಲ್ ಕಳವು ಆರೋಪಿ ಅರೆಸ್ಟ್

rahik
06/11/2022

ಕುಂದಾಪುರ: ಕಳೆದ ತಿಂಗಳ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿ ಕೊಂಡು ಪರಾರಿಯಾಗಿದ್ದ ಮೊಬೈಲ್ ಅಂಗಡಿ ಕಳವು ಆರೋಪಿಯನ್ನು ಕುಂದಾಪುರ ಪೊಲೀಸರು ಮುಂಬೈಯಲ್ಲಿ ಬಂಧಿಸಿದ್ದಾರೆ.

ಬಂಧಿತನನ್ನು ಮುಹಮ್ಮದ್ ರಾಹೀಕ್(22) ಎಂದು ಗುರುತಿಸಲಾಗಿದೆ. ಈತ ಕುಂದಾಪುರ ನಗರ ಠಾಣೆ ವ್ಯಾಪ್ತಿಯ ಬೀಜಾಡಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿಯ ಮೊಬೈಲ್ ಅಂಗಡಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದನು.

ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಈತನನ್ನು ಅ.20ರಂದು ಪೊಲೀಸರು ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹಕ್ಕೆ ಕರೆದುಕೊಂಡು ಹೋಗುತ್ತಿದ್ದರು. ಜೈಲಿನ ಮುಖ್ಯ ದ್ವಾರದ ಬಳಿ ಜೀಪಿನಿಂದ ಇಳಿಯುವಾಗ ಈತ ಪೊಲೀಸರನ್ನು ದೂಡಿ ಹಾಕಿ ಪರಾರಿಯಾಗಿದ್ದನು. ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version