ಮೊಬೈಲ್ ಟವರ್ ಗೆ ಹತ್ತಿಕೊಂಡ ಬೆಂಕಿ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ - Mahanayaka
1:10 PM Wednesday 5 - February 2025

ಮೊಬೈಲ್ ಟವರ್ ಗೆ ಹತ್ತಿಕೊಂಡ ಬೆಂಕಿ: ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ

mobile tower fire
25/09/2021

ದಾವಣಗೆರೆ: ದಾವಣಗೆರೆ ನಗರದ ಹಳೆ ಪ್ರವಾಸಿ ಮಂದಿರ ರಸ್ತೆಯ ಮಲ್ಲಿಕಾರ್ಜುನ ಲಾಡ್ಜ್ ಹಾಗೂ ಸಾರಸ್ವತ ಬ್ಯಾಂಕ್ ಹಿಂಭಾಗದಲ್ಲಿರುವ ಮೊಬೈಲ್ ಟವರ್‌ ನಲ್ಲಿ ಶನಿವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದ್ದು, ಘಟನೆಯಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.

ಘಟನೆ ವೇಳೆ ಸಕಾಲಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು ಈ ಮೂಲಕ ನಡೆಯಬಹುದಾಗಿದ್ದ ದೊಡ್ಡ ಅಪಾಯವನ್ನು ತಪ್ಪಿಸಿದೆ.

ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯ ಜ್ವಾಲೆ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿಯ ಜ್ವಾಲೆ ಹರಡುವುದನ್ನು ತಪ್ಪಿಸಿದರು. ಇದರಿಂದಾಗಿ ಸುತ್ತಮುತ್ತಲಿನ ಪ್ರದೇಶಗಳಿಗೆ ಬೆಂಕಿ ವ್ಯಾಪಿಸುವ ಅಪಾಯವನ್ನು ತಪ್ಪಿಸಿದ್ದು, ಭಾರೀ ದುರಂತವೊಂದು ಅಗ್ನಿಶಾಮಕ ದಳದ ಸಿಬ್ಬಂದಿಯ ಸಮಯ ಪ್ರಜ್ಷೆಯಿಂದ ತಪ್ಪಿದೆ.

ಇನ್ನೂ ಟವರ್ ಗೆ ಬೆಂಕಿ ಹತ್ತಿಕೊಂಡ ಪರಿಣಾಮ ಟವರ್ ಬ್ಯಾಟರಿ, ಜನರೇಟರ್, ಕೇಬಲ್‌ಗಳು ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ರಾಜ್ಯದಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ: ತರಕಾರಿ ತರಲು ಹೋದ ಬಾಲಕಿಯ ಮೇಲೆ ಅತ್ಯಾಚಾರ

ಕೃಷ್ಣ ಬೆಣ್ಣೆ ಕದ್ದರೆ ತುಂಟಾಟ, ಈ ಬಾಲಕ ಹಸಿವಿನಿಂದ ತಿಂಡಿ ಕದ್ದರೆ ಅಪರಾಧವೇ? | ನ್ಯಾಯಾಧೀಶರ ಪ್ರಶ್ನೆ

ಅಸ್ಪೃಶ್ಯತೆ ಅನಿಷ್ಟ ಪದ್ಧತಿ ಅದನ್ನು ತೊಲಗಿಸೋಣ | ಗ್ರಾಮಸ್ಥರಿಗೆ ಪ್ರತಿಜ್ಞೆ ಮಾಡಿಸಿದ ಪೊಲೀಸರು

ಸದಾ ಹಿಂಸಿಸುವ ಮೈಕೈ ನೋವಿಗೆ ಶಾಶ್ವತ ಪರಿಹಾರ ಏನು?

“ಪಿಎಂ ಕೇರ್ಸ್ ಫಂಡ್‍ ಗೆ  ಅಪ್ಪ-ಅಮ್ಮನೇ ಇಲ್ಲದಂತಾಗಿದೆ!”

ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು ಎಂದ ಉತ್ತರ ಪ್ರದೇಶ ಸಚಿವ!

ಮನಮೋಹನ್ ಸಿಂಗ್ ವಿಮಾನದಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿದ್ದರು | ಮೋದಿ ಫೋಟೋಗೆ ಕಾಂಗ್ರೆಸ್ ತಿರುಗೇಟು

ಸುಳ್ಳು ಜಾತಿ ಪ್ರಮಾಣ ಪತ್ರ:  ತಹಶೀಲ್ದಾರ್ ಸೇರಿದಂತೆ ಐವರ ವಿರುದ್ಧ ಎಫ್ ಐಆರ್

ಇತ್ತೀಚಿನ ಸುದ್ದಿ