ಮೊದಲ ಬಲಿ ಪಡೆದುಕೊಂಡ ಒಮಿಕ್ರಾನ್: 50 ವರ್ಷದ ವ್ಯಕ್ತಿ ಸಾವು
ಆಸ್ಟಿನ್: ಕೊವಿಡ್ 19ನ ರೂಪಾಂತರ ತಳಿ ಒಮಿಕ್ರಾನ್ ಪ್ರಪಂಚದಲ್ಲಿ ಮೊದಲ ಬಲಿ ಪಡೆದುಕೊಂಡಿದ್ದು, ಒಮಿಕ್ರಾನ್ ತಗಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಮೆರಿಕದ ಟೆಕ್ಸಾಸ್ ನ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಅಮೆರಿಕದಲ್ಲಿ ಒಮಿಕ್ರಾನ್ ಮೊದಲ ಬಲಿ ಪಡೆದುಕೊಂಡಿದ್ದು, ಇದು ಒಮಿಕ್ರಾನ್ ವೈರಸ್ ನಿಂದ ಸಂಭವಿಸಿದ ಮೊದಲ ಸಾವು ಎಂದು ಪರಿಗಣಿಸಲಾಗಿದೆ ಎಂದು ಟೆಕ್ಸಾಸ್ ನ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಮೃತಪಟ್ಟ ವ್ಯಕ್ತಿ 50 ವರ್ಷ ವಯಸ್ಸಿನವರಾಗಿದ್ದು, ಇವರು ಕೊವಿಡ್ ಲಸಿಕೆ ಪಡೆದಿರಲಿಲ್ಲ ಎಂದು ಹೇಳಲಾಗಿದೆ. ಒಮಿಕ್ರಾನ್ ನಿಂದಾಗ ಅಸ್ವಸ್ಥರಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅಮೆರಿಕದಲ್ಲಿ ಕಳೆದ 1 ವಾರಗಳಲ್ಲಿ ಪತ್ತೆಯಾದ ಕೊವಿಡ್ ಪ್ರಕರಣಗಳಲ್ಲಿ ಶೇ.73ರಷ್ಟು ಒಮಿಕ್ರಾನ್ ಪ್ರಕರಣಗಳೂ ಎಂದು ಅಮೆರಿಕದ ಕಾಯಿಲೆ ನಿಯಂತ್ರಣ ಮತ್ತು ತಡೆ ಕೇಂದ್ರ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ರಶ್ಮಿಕಾ ಮಂದಣ್ಣ ಜೊತೆಗೆ ತೆರೆ ಹಂಚಿಕೊಳ್ಳುತ್ತಾರಾ ಡಾಲಿ ಧನಂಜಯ್?
ಕನ್ನಡ ಬಾವುಟ ಸುಟ್ಟದ್ದು, ಕನ್ನಡ ತಾಯಿಯನ್ನೇ ಸುಟ್ಟಂತೆ | ನಟ ಶಿವರಾಜ್ ಕುಮಾರ್
ಆನ್ ಲೈನ್ ಕ್ಲಾಸ್ ನ ಗ್ರೂಪ್ ಗೆ ಅಶ್ಲೀಲ ವಿಡಿಯೋ ಶೇರ್ ಮಾಡಿದ ಗಣಿತ ಶಿಕ್ಷಕ!
ಬೆಳಗಾವಿ ಸುವರ್ಣಸೌಧ ಮುತ್ತಿಗೆ ಯತ್ನ: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಉದ್ಯಮಿ
ಮೈಸೂರು: ಮ್ಯಾನ್ ಹೋಲ್ ಸ್ವಚ್ಛತೆಗೆ ಇಳಿದ ಪೌರಕಾರ್ಮಿಕ ಸಾವು
ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣ: ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಗೆ ಇಡಿ ಸಮನ್ಸ್