ತಂಪೆರೆದ ಮಳೆರಾಯ: ಕಡಬ ಸೇರಿದಂತೆ ಹಲವೆಡೆ ಗಾಳಿ ಸಹಿತ ಮಳೆಯಾಗಿದೆ

ಕಡಬ: ಕಳೆದೊಂದು ತಿಂಗಳುಗಳಿಂದ ರಣ ಬಿಸಿಲಿನಿಂದ ತತ್ತರಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಕಡಬ, ಸುಬ್ರಮಣ್ಯ, ಶಿರಾಡಿ, ಸುಳ್ಯ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಮಾ.12ರ ಸಂಜೆ ಗಾಳಿ ಸಹಿತ ಮಳೆಯಾಗಿದ್ದು, ಮಳೆರಾಯ ತಂಪೆರೆದಿದ್ದಾನೆ.
ಮುಂದಿನ ಎರಡು ದಿನಗಳ ಕಾಲ ಕರ್ನಾಟಕ ಸೇರಿ ಇತರೆ ರಾಜ್ಯಗಳಲ್ಲಿ ಬಾರಿ ಮಳೆಯಾಗಲಿವೆ ಎನ್ನುವ ಹವಾಮಾನ ಇಲಾಖೆ ವರದಿಯ ಬೆನ್ನಲ್ಲೇ ಇಂದು ಮಳೆಯಾಗಿದ್ದು, ಶಾಲಾ ಕಾಲೇಜುಗಳು ಬಿಡುವ ಸಮಯದಲ್ಲೇ ಜೋರಾಗಿ ಬಂದ ಮಳೆಯಿಂದಾಗಿ ಕೊಡೆ ಇಲ್ಲದೇ ಮಳೆಯಲ್ಲಿ ವಿದ್ಯಾರ್ಥಿಗಳು ಪರದಾಡಿದರು.
ಇದಲ್ಲದೇ ದ್ವಿಚಕ್ರ ವಾಹನ ಸವಾರರು ಸೇರಿದಂತೆ ಸಾರ್ವಜನಿಕರು ಮಳೆಯಿಂದಾಗಿ ಪರದಾಡಿದರು. ಕಳೆದ ಹಲವು ದಿನಗಳಿಂದ ಸುಡು ಬಿಸಿಲಿನಿಂದ ರೋಸಿ ಹೋಗಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಹವಾಮಾನ ಇಲಾಖೆ ವರದಿಗಳ ಪ್ರಕಾರ ಇನ್ನೂ ಎರಡು ದಿನಗಳ ಕಾಲ ರಾಜ್ಯದ ವಿವಿಧೆಡೆಗಳಲ್ಲಿ ಮಳೆಯಾಗಲಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: