ಪ್ರಧಾನಿ ಮೋದಿ ದಬ್ಬಾಳಿಕೆಯ ಮೂಲಕ ದೇಶ ಆಳುತ್ತಿದ್ದಾರೆ | ದಿನೇಶ್ ಗುಂಡೂರಾವ್

09/02/2021

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆಡಳಿತವನ್ನು ಹೆಚ್ಚು ದಿನ ಸಹಿಸಲು ಸಾಧ್ಯವಿಲ್ಲ. ತಪ್ಪು ದಾರಿಯಲ್ಲಿ ದೇಶ ಹೋಗುತ್ತಿದ್ದು, ಇದನ್ನು ಸರಿಪಡಿಸುವುದು  ಕಾಂಗ್ರೆಸ್ ಕಾರ್ಯಕರ್ತರ ಜವಾಬ್ದಾರಿಯಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್ ಹಾಗೂ ಡೀಸೆಲ್ ದರ ಹೆಚ್ಚಳ ಖಂಡಿಸಿ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ನಡೆದ  ಪ್ರತಿಭಟನೆಯುಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಪ್ರಧಾನಿ ನರೇಂದ್ರ ಮೋದಿ ದಬ್ಬಾಳಿಕೆಯ ಮೂಲಕ ದೇಶ ಆಳುತ್ತಿದ್ದಾರೆ ಎಂದು ಹೇಳಿದರು.

ವಿದೇಶದಲ್ಲಿ ಪೆಟ್ರೋಲ್ ಬೆಲೆ ಕಡಿಮೆ ಇದ್ದರೂ  ಕೇಂದ್ರ ಸರ್ಕಾರ ದುಡ್ಡು ಮಾಡಲು ತೆರಿಗೆ ಹೆಚ್ಚು ಮಾಡಿದೆ. ಏರಿಕೆ ಮಾಡಲಾದ ಪೆಟ್ರೋಲ್ ದರದಲ್ಲಿ 33 ರೂ. ಕೇಂದ್ರ ಸರ್ಕಾರಕ್ಕೆ ಹೋಗುತ್ತಿದೆ ಎಂದು ಅವರು ಆರೋಪಿಸಿದರು.

ಇತ್ತೀಚಿನ ಸುದ್ದಿ

Exit mobile version