‘ದ್ವೇಷವನ್ನು ಹರಡುವ ಮೂಲಕ ಅಧಿಕಾರದಲ್ಲಿ ಉಳಿಯುವುದು ಮೋದಿ ಸರ್ಕಾರದ ಉದ್ದೇಶ’: ವಯನಾಡ್ ನಲ್ಲಿ ಪ್ರಧಾನಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ
ಹಿರಿಯ ಕಾಂಗ್ರೆಸ್ ನಾಯಕಿ ಮತ್ತು ವಯನಾಡ್ ಲೋಕಸಭಾ ಉಪಚುನಾವಣೆಯ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಯಾವುದೇ ರೀತಿಯಲ್ಲಾದ್ರೂ ಅಧಿಕಾರದಲ್ಲಿ ಉಳಿಯುವ ಗುರಿಯನ್ನು ಹೊಂದಿದ್ದಾರೆ. ಅವರುಜನರ ಯೋಗಕ್ಷೇಮಕ್ಕಿಂತ ದೊಡ್ಡ ಉದ್ಯಮ ಹಿತಾಸಕ್ತಿಗಳಿಗೆ ಆದ್ಯತೆ ನೀಡುತ್ತಾರೆ ಎಂದು ಆರೋಪಿಸಿದ್ದಾರೆ.
ಉಪಚುನಾವಣೆಗೆ ಮುಂಚಿತವಾಗಿ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ನಡೆಸಲು ವಯನಾಡ್ ಗೆ ಆಗಮಿಸಿದ್ದ ಪ್ರಿಯಾಂಕಾ ಗಾಂಧಿ, ಜನರನ್ನು ವಿಭಜಿಸುವ ಮೂಲಕ, ದ್ವೇಷವನ್ನು ಹರಡುವ ಮೂಲಕ ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳನ್ನು ದಮನಿಸುವ ಮೂಲಕ ಮೋದಿ ಸರ್ಕಾರ ಅಧಿಕಾರದಲ್ಲಿ ಉಳಿಯಲು ಬಯಸಿದೆ ಎಂದು ಆರೋಪಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj