ಮೋದಿ ಜನರಿಗೆ ನೀಡಿದ ಭರವಸೆ ಈಡೇರಿಸಿಲ್ಲ, ಅದಾನಿಗೆ ನೀಡಿದ ಭರವಸೆ ಈಡೇರಿಸಿದ್ದಾರೆ: ರಾಹುಲ್ ಗಾಂಧಿ ವ್ಯಂಗ್ಯ - Mahanayaka
10:59 AM Wednesday 5 - February 2025

ಮೋದಿ ಜನರಿಗೆ ನೀಡಿದ ಭರವಸೆ ಈಡೇರಿಸಿಲ್ಲ, ಅದಾನಿಗೆ ನೀಡಿದ ಭರವಸೆ ಈಡೇರಿಸಿದ್ದಾರೆ: ರಾಹುಲ್ ಗಾಂಧಿ ವ್ಯಂಗ್ಯ

rahulgandhi
27/04/2023

ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರಥಮ ಕ್ಯಾಬಿನೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ನೀಡಿದ 4 ಭರವಸೆ ಮತ್ತು ರಾಜ್ಯದ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ಈಡೇರಿಸಲು ಕ್ರಮ ಕೈಗೊಳ್ಳಲಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿಳಿಸಿದ್ದಾರೆ.

ಅವರು ಸಹ್ಯಾದ್ರಿ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶವನ್ನುದ್ದೇಶಿಸಿ ಮಾತನಾಡುತ್ತಿದ್ದರು. ರಾಜ್ಯದಲ್ಲಿ ಭ್ರಷ್ಟಾಚಾರದ ಮೂಲಕ ಶಾಸಕರನ್ನು ಖರೀದಿಸಿ ಬಿಜೆಪಿ ಸರ್ಕಾರ ರಚಿಸಿದೆ. ಭ್ರಷ್ಟಾಚಾರದ ಮೂಲಕ ಅಧಿಕಾರ ಪಡೆದ ಬಿಜೆಪಿ ಎಲ್ಲಾ ಕ್ಷೇತ್ರದಲ್ಲಿಯೂ ಶೇಕಡಾ 40 ಕಮೀಷನ್ ಪಡೆದಿದೆ ಎಂದು ಆರೋಪಿಸಿದರು.

ಮಠದ ಕಾಮಗಾರಿಯಲ್ಲಿ ಶೇಕಡಾ 30 ಕಮೀಷನ್ ಪಡೆದು ಕಾಮಗಾರಿ ನಡೆಸಿದ್ದಾರೆ ಎನ್ನುವ ಬಗ್ಗೆ ಕರ್ನಾಟಕದ ಜನ ಹೇಳುತ್ತಿದ್ದಾರೆ. ಇನ್ನೊಂದು ಕಡೆ ಬೆಲೆ ಏರಿಕೆ, ದೇಶದಲ್ಲಿ 40 ಕೋಟಿ ಜನ ಬಡತನ ರೇಖೆಗಿಂತ ಕೆಳಗಿಳಿದಿದ್ದಾರೆ. ಶೇ ಒಂದರಷ್ಟು ಜನರಲ್ಲಿ ಶೇಕಡಾ 40 ಸಂಪತ್ತು ಶೇಖರಣೆಯಾಗಿದೆ. 90ಲಕ್ಷ ಸಣ್ಣ ಕೈಗಾರಿಕೆಗಳು ಸಂಪೂರ್ಣ ಮುಚ್ಚಿದೆ. 1.4 ಲಕ್ಷ ಜನ ಉದ್ಯೋಗ ಕಳೆದುಕೊಂಡರು. ಮೋದಿ ಜನರಿಗೆ ನೀಡಿದ ಭರವಸೆ ಈಡೇರಿಸಿಲ್ಲ ಆದರೆ ಅದಾನಿಗೆ ನೀಡಿದ ಎಲ್ಲಾ ಭರವಸೆ ಈಡೇರಿಸಿದ್ದಾರೆ ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಇನ್ನು ಇಂದಿರಾ ಗಾಂಧಿ ಮಂಗಳೂರು  ವಿಮಾನ ನಿಲ್ದಾಣ, ಬಂದರು ಎಂಸಿಎಫ್ ನಂತಹ ಕಾರ್ಖಾನೆಯನ್ನು ಇಲ್ಲಿ ಸ್ಥಾಪನೆ ಮತ್ತು ಅಭಿವೃದ್ಧಿ ಮಾಡಿರುವುದು ನನಗೆ ಗೊತ್ತಿದೆ. ಇಲ್ಲಿನ ಬ್ಯಾಂಕ್ ಗಳನ್ನು ರಾಷ್ಟ್ರೀಕರಣ ಮಾಡಿ ಕೊಡುಗೆ ನೀಡಿದ್ದಾರೆ. ಇಂತಹ ಬ್ಯಾಂಕ್ ಗಳನ್ನು ಮೋದಿ ಸರಕಾರ ವಿಲೀನಗೊಳಿಸಿದೆ. ವಿಮಾನ ನಿಲ್ದಾಣ ವನ್ನು ಅದಾನಿಗೆ ನೀಡಿ ಇಲ್ಲಿನ ಜನರನ್ನು ನಿರ್ಲಕ್ಷಿಸಿದೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ