ಕುವೈತ್ ನಲ್ಲಿ ಪ್ರಧಾನಿ ಮೋದಿಗೆ ಗಲ್ಫ್ ರಾಷ್ಟ್ರದ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ನೀಡಿ ಗೌರವ
ಎರಡು ದಿನಗಳ ಕುವೈತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕುವೈತ್ ಅಮೀರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾಹ್ ಅವರಿಂದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ದಿ ಆರ್ಡರ್ ಆಫ್ ಮುಬಾರಕ್ ದಿ ಗ್ರೇಟ್’ ಸ್ವೀಕರಿಸಿದರು.
ಇದಕ್ಕೂ ಮುನ್ನ, ಗಲ್ಫ್ ರಾಷ್ಟ್ರಕ್ಕೆ ಅಧಿಕೃತ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಕುವೈತ್ ನಲ್ಲಿ ಉತ್ಸಾಹಭರಿತ ಔಪಚಾರಿಕ ಸ್ವಾಗತ ಮತ್ತು ಗಾರ್ಡ್ ಆಫ್ ಹಾನರ್ ನೀಡಲಾಯಿತು. ಕುವೈತ್ ನ ಬಯಾನ್ ಅರಮನೆಯಲ್ಲಿ ಅವರಿಗೆ ಔಪಚಾರಿಕ ಗೌರವ ರಕ್ಷೆ ನೀಡಲಾಯಿತು.
ಕುವೈತ್ ನ ಅಮೀರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾಹ್ ಕೂಡ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಭೆಯ ವಿವರಗಳನ್ನು ವಿದೇಶಾಂಗ ಸಚಿವಾಲಯದ ವಕ್ತಾರರು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj