ರೌಡಿಶೀಟರ್ ಗೆ ಕೈ ಮುಗಿದ ಮೋದಿ: ಕಾಂಗ್ರೆಸ್ ನಿಂದ ತೀವ್ರ ಆಕ್ಷೇಪ! - Mahanayaka
7:34 PM Wednesday 5 - February 2025

ರೌಡಿಶೀಟರ್ ಗೆ ಕೈ ಮುಗಿದ ಮೋದಿ: ಕಾಂಗ್ರೆಸ್ ನಿಂದ ತೀವ್ರ ಆಕ್ಷೇಪ!

fighter ravi with pm modi
12/03/2023

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್ ವೇ ಉದ್ಘಾಟನೆ ಕಾರ್ಯಕ್ರಮದಲ್ಲಿ ಫೈಟರ್ ರವಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ರೌಡಿ ಶೀಟರ್‌ಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ ಎನ್ನುವ ಬಿಜೆಪಿ, ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು ಎಂದು ಟೀಕಿಸಿದೆ.

ಈ ಬಗ್ಗೆ ಟ್ವಿಟ್ ಮಾಡಿರುವ ಕೆಪಿಸಿಸಿ, ಜಗತ್ತಿನಲ್ಲಿಯೇ ಬಿಜೆಪಿಯಂತಹ ನಿರ್ಲಜ್ಜ ರಾಜಕೀಯ ಪಕ್ಷ ಬೇರೆ ಇರಲು ಸಾಧ್ಯವೇ ಇಲ್ಲ. ಫೈಟರ್ ರವಿ ಎಂಬ ರೌಡಿ ಶೀಟರ್ ಎದುರು ಕೈಮುಗಿದು ನಿಂತ ನರೇಂದ್ರ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ. ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದ ಬಿಜೆಪಿ, ರೌಡಿಯನ್ನು ಪ್ರಧಾನಿ ಎದುರು ನಿಲ್ಲಿಸಿದ್ದು ನಾಚಿಕೆಗೇಡು ಎಂದು ಟೀಕಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ