ಮೋದಿ ಸರ್ಕಾರ ಕಿತ್ತೊಗೆಯುವ ಸಮಯ ಹತ್ತಿರವಾಗಿದೆ: ತೆಲಂಗಾಣ ಸಿಎಂ ಕೆಸಿಆರ್

ಹೈದರಾಬಾದ್: ಮೋದಿ ಸರ್ಕಾರವನ್ನು ಕಿತ್ತೊಗೆಯುವ ಸಮಯ ಹತ್ತಿರವಾಗಿದೆ. ಬಿಜೆಪಿಯನ್ನು ಕಿತ್ತೊಗೆಯಲು ಎಲ್ಲ ರಾಜಕೀಯ ಶಕ್ತಿಗಳು ಒಂದಾಗಬೇಕು. ಜನರೆಲ್ಲ ಒಗ್ಗೂಡಿದರೆ ನಾಯಕರ ಕುರ್ಚಿಗಳು ಕದಲುತ್ತವೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿದ್ದಾರೆ.
ಕಾಂಗ್ರೆಸ್‌ನತ್ತ ತಮ್ಮ ಒಲವಿನ ಸುಳಿವು ನೀಡಿರುವ ಕೆಸಿಆರ್, ದೇಶದಲ್ಲಿ ಬಿಜೆಪಿ ಆಡಳಿತ ಮುಂದುವರೆದರೆ ದೇಶ ಸರ್ವನಾಶವಾಗಲಿದೆ. ವಿವಿಧ ರಾಜಕೀಯ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನಗಳ ಭಾಗವಾಗಿ ಶೀಘ್ರದಲ್ಲೇ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರೊಂದಿಗೆ ಸಭೆ ನಡೆಸುವುದಾಗಿ ಅವರು ತಿಳಿಸಿದ್ಧಾರೆ.
ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಅಧ್ಯಕ್ಷರು ಬ್ಯಾನರ್ಜಿ ಅವರಿಗೆ ಕರೆ ಮಾಡಿದ್ದಾರೆ ಮತ್ತು ಅವರು ದೂರವಾಣಿಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಹೇಳಿದರು.
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕೆಸಿಆರ್, ಧರ್ಮದ ಹೆಸರಿನಲ್ಲಿ ಗಲಭೆ ಸೃಷ್ಟಿಸುವ ಪ್ರಯತ್ನಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಇದು ಅಂತರ್ಯುದ್ಧದಂತಹ ಪರಿಸ್ಥಿತಿಗೆ ಕಾರಣವಾಗಬಹುದು ಎಂದು ಅವರು ಎಚ್ಚರಿಕೆ ನೀಡಿದರು.
ಆನ್‍ಲೈನ್ ಗೇಮಿಂಗ್ ನಿಷೇಧ: ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಹಿಜಾಬ್ ಧರಿಸದೇ ಇರುವುದರಿಂದ ಅತ್ಯಾಚಾರ ಹೆಚ್ಚುತ್ತಿದೆ | ಜಮೀರ್ ಅಹ್ಮದ್ ಹೇಳಿಕೆ
ಮದುವೆ ಮೆರವಣಿಗೆಯಲ್ಲಿ ಸುಡುಮದ್ದು ಸ್ಫೋಟ: ಓರ್ವ ಸಾವು, ಇಬ್ಬರಿಗೆ ಗಾಯ