ಇಂದು ಕುವೈತ್ ಗೆ ಮೋದಿ ಭೇಟಿ: 40 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತದ ಪ್ರಧಾನಿಯ ಭೇಟಿ - Mahanayaka
11:02 AM Wednesday 12 - March 2025

ಇಂದು ಕುವೈತ್ ಗೆ ಮೋದಿ ಭೇಟಿ: 40 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತದ ಪ್ರಧಾನಿಯ ಭೇಟಿ

21/12/2024

ಪ್ರಧಾನಿ ನರೇಂದ್ರ ಮೋದಿಯವರು ಎರಡು ದಿನಗಳ ಕುವೈತ್ ಗೆ ಭೇಟಿ ನೀಡಲಿದ್ದಾರೆ. ಈ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಕುವೈತ್ ರಕ್ಷಣೆ ಮತ್ತು ವ್ಯಾಪಾರ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಬಲಪಡಿಸುವತ್ತ ಗಮನ ಹರಿಸುವ ನಿರೀಕ್ಷೆಯಿದೆ.

ಕುವೈತ್ ನ ಉನ್ನತ ನಾಯಕರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ. ಭಾರತೀಯ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಲಿದ್ದು ಅಲ್ಲದೇ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಗಲ್ಫ್ ಕಪ್ ಫುಟ್ಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಕಳೆದ 43 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಗಲ್ಫ್ ರಾಷ್ಟ್ರಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು.
ಪ್ರಧಾನಿಯವರ ಪ್ರವಾಸಕ್ಕೆ ಒಂದು ದಿನ ಮುಂಚಿತವಾಗಿ, ವಿದೇಶಾಂಗ ಸಚಿವಾಲಯ (ಎಂಇಎ) ಕುವೈತ್ನೊಂದಿಗೆ ದ್ವಿಪಕ್ಷೀಯ ಹೂಡಿಕೆ ಒಪ್ಪಂದ ಮತ್ತು ರಕ್ಷಣಾ ಸಹಕಾರ ಒಪ್ಪಂದದ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದೆ.


Provided by

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ