ಮೊಘಲರ ಆಳ್ವಿಕೆಯ 600 ವರ್ಷಗಳ ಕಾಲ ಪ್ರಮುಖ ಹುದ್ದೆ ಅಲಂಕರಿಸಿದ್ದವರು ಬ್ರಾಹ್ಮಣರು | ಸಿದ್ದರಾಮಯ್ಯ
ಬೆಂಗಳೂರು: ಮೊಘಲರ 600 ವರ್ಷಗಳ ಆಳ್ವಿಕೆ ಕಾಲದ ಅಷ್ಟೂ ಸಮಯದಲ್ಲಿ ಪ್ರಮುಖ ಹುದ್ದೆ ಅಲಂಕರಿಸಿದ್ದವರು ಬ್ರಾಹ್ಮಣರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದು, ಟಿಪ್ಪು ಸುಲ್ತಾನನ ದಿವಾನರಾಗಿದ್ದವರು ಯಾವ ಜಾತಿಗೆ ಸೇರಿದವರು ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕ್ವಿಟ್ ಇಂಡಿಯಾ’ ಚಳುವಳಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನುದ್ದೇಶಿಸಿ, ಮಾತನಾಡಿದ ಸಿದ್ದರಾಮಯ್ಯನವರು ಟಿಪ್ಪು ಜಯಂತಿ ವಿಚಾರವಾಗಿ ಮಾತನಾಡುತ್ತಾ, ಈ ಪ್ರಶ್ನೆಗಳನ್ನು ಹಾಕಿದರು ಎಂದು ವರದಿಯಾಗಿದೆ.
ನಾನು ಟಿಪ್ಪು ಸುಲ್ತಾನ್ ಜಯಂತಿ ಮಾಡಿದಾಗ ನನ್ನನ್ನು ಹಿಂದು ವಿರೋಧಿ ಎಂದು ಬಿಂಬಿಸಿದರು. ಟಿಪ್ಪು ರಾಜ್ಯದಲ್ಲಿ ದಿವಾನರಾಗಿದ್ದವರು ಯಾರು? ಅವರು ಯಾವ ಜಾತಿಗೆ ಸೇರಿದವರು? ಟಿಪ್ಪು ಆಡಳಿತದಲ್ಲಿ ಹಣಕಾಸು ಜವಾಬ್ದಾರಿ ನಿಭಾಯಿಸಿದ್ದ ಕೃಷ್ಣಸ್ವಾಮಿ ಅವರು ಯಾವ ಜಾತಿಗೆ ಸೇರಿದವರು? ಮೊಘಲರ 600 ವರ್ಷಗಳ ಆಳ್ವಿಕೆ ಕಾಲದ ಅಷ್ಟೂ ಸಮಯದಲ್ಲಿ ಪ್ರಮುಖ ಹುದ್ದೆ ಅಲಂಕರಿಸಿದ್ದವರು ಬ್ರಾಹ್ಮಣರೇ… ಎಂದು ಸಿದ್ದರಾಮಯ್ಯ ಹೇಳಿದರು.
ಟಿಪ್ಪು ಆಡಳಿತ ಅವಧಿಯಲ್ಲಿ ನಾಲ್ಕು ಯುದ್ಧಗಳು ನಡೆದವು, ಅದು ಬ್ರಿಟೀಷರ ವಿರುದ್ಧವಾಗಿತ್ತು. ಟಿಪ್ಪು ಯಾವ ದೇಶ ದ್ರೋಹ ಮಾಡಿದ್ದ ಅಂತಾ ಯಾರಾದರೂ ಹೇಳುತ್ತಾರಾ? ಇಲ್ಲ. ಬ್ರಿಟೀಷರ ವಿರುದ್ಧ ಹೋರಾಡಿದ ವ್ಯಕ್ತಿ ಜಯಂತಿ ಮಾಡಿದರೆ ನಿಮಗ್ಯಾಕೆ ಕೋಪ? ಬಿಜೆಪಿಯವರಿಗೆ ಪೂರ್ಣಯ್ಯ ಅವರ ಮೇಲೆ ಕೋಪ ಇಲ್ಲ, ಹೇಗಿದೆ ನೋಡಿ ಬಿಜೆಪಿಯ ದ್ವಂಧ್ವ ನೀತಿ. ಇದನ್ನು ನೋಡಿದರೆ, ಬಿಜೆಪಿಗರು ಎಂತಹ ನೀಚರು ಎಂದು ಸಾಬೀತಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಇನ್ನಷ್ಟು ಸುದ್ದಿಗಳು…
ಬಿಜೆಪಿಯಲ್ಲಿ ಅತೃಪ್ತಿಯ ಉರಿ: ದೆಹಲಿಯಲ್ಲಿ ಬೀಡು ಬಿಟ್ಟ ರಮೇಶ್ ಜಾರಕಿಹೊಳಿ ತಂಡ
ಹೂಗುಚ್ಛ, ಹಾರ ಸಂಪ್ರದಾಯಕ್ಕೆ ಬ್ರೇಕ್ ಹಾಕಿದ ಸಿಎಂ ಬೊಮ್ಮಾಯಿ | ಕನ್ನಡ ಪುಸ್ತಕ ಕೊಡಲು ಆದೇಶ
SSLC Exam result 2021 | ಓರ್ವ ವಿದ್ಯಾರ್ಥಿಯನ್ನು ಹೊರತುಪಡಿಸಿ, ಎಲ್ಲರೂ ಪಾಸ್
ತಾಯಾಣೆ ನಾನು ಅಷ್ಟೊಂದು ಹಣವನ್ನು ಎಂದಿಗೂ ನೋಡೇ ಇಲ್ಲ | ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ
ಶೂಟಿಂಗ್ ವೇಳೆ ಫೈಟರ್ ಸಾವು: ಕೊನೆಗೂ ಮೌನ ಮುರಿದ ರಚಿತಾ ರಾಮ್
ಕೇವಲ 11 ನಿಮಿಷ ಮಾತ್ರ ರೇಪ್ ಆಗಿದೆ ಎಂದು ಶಿಕ್ಷೆ ಕಡಿಮೆ ಮಾಡಿ ತೀರ್ಪು ನೀಡಿದ ನ್ಯಾಯಾಧೀಶ!