ಮೊಹಾಲಿ ಕಟ್ಟಡ ಕುಸಿತ: ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ; ಕಟ್ಟಡ ಮಾಲೀಕರ ವಿರುದ್ಧ ಪ್ರಕರಣ ದಾಖಲು
ಪಂಜಾಬ್ ನ ಮೊಹಾಲಿ ಜಿಲ್ಲೆಯ ಸೊಹಾನಾ ಗ್ರಾಮದಲ್ಲಿ ಶನಿವಾರ ಕುಸಿದ ನಾಲ್ಕು ಅಂತಸ್ತಿನ ಕಟ್ಟಡದ ಅವಶೇಷಗಳಿಂದ ಹಿಮಾಚಲ ಪ್ರದೇಶ ಮೂಲದ 20 ವರ್ಷದ ಮಹಿಳೆ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಥಿಯೋಗ್ ಮೂಲದ ದೃಷ್ಟಿ ವರ್ಮಾ ಅವರನ್ನು ಗಂಭೀರ ಸ್ಥಿತಿಯಲ್ಲಿ ಅವಶೇಷಗಳಿಂದ ರಕ್ಷಿಸಲಾಗಿದ್ದು, ಸೊಹಾನಾ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಹಂಗಾಮಿ ಜಿಲ್ಲಾಧಿಕಾರಿ ವಿರಾಜ್ ಎಸ್ ಟಿಡ್ಕೆ ತಿಳಿಸಿದ್ದಾರೆ.
ಆದರೆ ಚಿಕಿತ್ಸೆ ಫಲಕಾರಿಯಾಗದೆ ವರ್ಮಾ ಮೃತಪಟ್ಟಿದ್ದಾರೆ.
ಶನಿವಾರ ಸಂಜೆ ಬಹುಮಹಡಿ ಕಟ್ಟಡ ಕುಸಿದಿದ್ದು, ಕನಿಷ್ಠ ಐದು ಜನರು ಅದರ ಅವಶೇಷಗಳಲ್ಲಿ ಸಿಲುಕಿದ್ದಾರೆ.
ಪೊಲೀಸರು ಕಟ್ಟಡ ಮಾಲೀಕರಾದ ಪರ್ವಿಂದರ್ ಸಿಂಗ್ ಮತ್ತು ಗಗನ್ ದೀಪ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಮೊಹಾಲಿ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಪರೀಕ್ ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj