ನಟ ಮೋಹನ್ ಲಾಲ್ ವಿರುದ್ಧ ದಂತ ಪ್ರಕರಣ: ಸರ್ಕಾರದ ನಿರ್ಧಾರದ ವಿರುದ್ಧದ ಅರ್ಜಿಗಳನ್ನು ತಿರಸ್ಕರಿಸಿದ ಕೋರ್ಟ್
ನಟ ಮೋಹನ್ ಲಾಲ್ ವಿರುದ್ಧದ ದಂತ ಪ್ರಕರಣವನ್ನು ಹಿಂಪಡೆದ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಸಲಾದ ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿದೆ. ಪೆರುಂಬವೂರ್ ಜ್ಯುಡಿಷಿಯಲ್ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಕೋರ್ಟ್ ಪ್ರಕರಣವನ್ನು ವಜಾಗೊಳಿಸಿದೆ.
ಪ್ರಕರಣವನ್ನು ಮುಂದುವರಿಸುವುದರಲ್ಲಿ ಯಾವುದೇ ನ್ಯಾಯ ಇಲ್ಲ ಎಂದು, ಹಿಂಪಡೆಯಲು ಅವಕಾಶ ನೀಡಬೇಕು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಇಂತಹ ಮನವಿಯೊಂದಿಗೆ ನ್ಯಾಯಾಲಯವನ್ನು ಸಂಪರ್ಕಿಸಲು ಅರ್ಜಿದಾರರಿಗೆ ಯಾವುದೇ ಹಕ್ಕಿಲ್ಲ ಮತ್ತು ಇದು ಸಾರ್ವಜನಿಕ ಹಣಕ್ಕೆ ಸಂಬಂಧಿಸಿದ ಪ್ರಕರಣವಲ್ಲದ ಕಾರಣ ಅರ್ಜಿದಾರರಿಗೆ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸರ್ಕಾರ ವಾದಿಸಿತು. ಮಾಜಿ ಅರಣ್ಯಾಧಿಕಾರಿ ಜೇಮ್ಸ್ ಮ್ಯಾಥ್ಯೂ ಮತ್ತು ಸಾರ್ವಜನಿಕ ಕಾರ್ಯಕರ್ತ ಎ.ಎ. ಪಾಲ್ ಮತ್ತಿತರರು ಸಲ್ಲಿಸಿದ್ದ ಅರ್ಜಿಗಳನ್ನು ತಿರಸ್ಕರಿಸಲಾಗಿದೆ.
2012ರಲ್ಲಿ ಈ ಘಟನೆ ನಡೆದಿದ್ದು ಕೊಚ್ಚಿಯಲ್ಲಿರುವ ಮೋಹನ್ ಲಾಲ್ ಅವರ ಮನೆಯಿಂದ ಆದಾಯ ತೆರಿಗೆ ಇಲಾಖೆ ನಡೆಸಿದ ತಪಾಸಣೆ ನಡೆಸಿದ ವೇಳೆ ದಂತವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಯು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿತ್ತು.
ಆದಾಯ ತೆರಿಗೆ ಇಲಾಖೆ ವಶಪಡಿಸಿಕೊಳ್ಳಲಾದ ಆನೆ ದಂತವನ್ನು ಕೆ ಕೃಷ್ಣಕುಮಾರ್ ಅವರಿಂದ ಹಣ ಕೊಟ್ಟು ಖರೀದಿಸಲಾಗಿದೆ ಎಂದು ಮೋಹನ್ ಲಾಲ್ ಹೇಳಿಕೊಂಡಿದ್ದಾರೆ. ಪ್ರಕರಣವನ್ನು ವಜಾಗೊಳಿಸಿದ ನಂತರ, ಯುಡಿಎಫ್ ಸರ್ಕಾರದ ಅವಧಿಯಲ್ಲಿ ಮೋಹನ್ ಲಾಲ್ ಅವರಿಗೆ ದಂತವನ್ನು ಇಟ್ಟುಕೊಳ್ಳಲು ಅನುಮತಿ ನೀಡಲಾಗಿತ್ತು.
ಪ್ರಕರಣವನ್ನು ಹಿಂಪಡೆಯಲು ನಮ್ಮ ಅಭ್ಯಂತರವಿಲ್ಲ ಎಂದು ಎಲ್‌ಡಿಎಫ್ ಸರ್ಕಾರ ನಂತರ ನ್ಯಾಯಾಲಯಕ್ಕೆ ತಿಳಿಸಿದೆ. ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿಗಳನ್ನು ನ್ಯಾಯಾಲಯ ತಿರಸ್ಕರಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬೆಲೆ ಏರಿಕೆ ನಡುವೆ ಎಣ್ಣೆ ಪ್ರಿಯರಿಗೆ ಶಾಕಿಂಗ್ ನ್ಯೂಸ್
ದೃಷ್ಟಿ ಹೀನರಿಗೆ ವಿಶೇಷ ಶೂ ನಿರ್ಮಿಸಿದ ಬಾಲಕ: ಈ ಶೂನ ವಿಶೇಷತೆ ಏನು?
ದಲಿತ ಯುವಕನ ಹತ್ಯೆ: ಬೇಜವಾಬ್ದಾರಿ ಹೇಳಿಕೆ ನೀಡಿದ ಅರಗ ಜ್ಞಾನೇಂದ್ರ: 2 ಲಕ್ಷ ನೆರವು ನೀಡಿದ ಜಮೀರ್
ಕೆಎಸ್ಸಾರ್ಟಿಸಿ ಬಸ್ಸು ಮತ್ತು ಕಾರು ಡಿಕ್ಕಿ ಇಬ್ಬರ ಸಾವು