ಜಸ್ಟೀಸ್ ಮನೆಯಲ್ಲಿ ಹಣ ಪತ್ತೆ ಕೇಸ್: ಹುದ್ದೆಯಿಂದ ವಜಾಗೊಂಡ ನ್ಯಾಯಾಧೀಶರು

ತನ್ನ ನಿವಾಸದಲ್ಲಿ ಅಪಾರ ಹಣ ಪತ್ತೆಯಾದ ಆರೋಪದಲ್ಲಿ ತನಿಖೆ ಎದುರಿಸುತ್ತಿರುವ ಜಸ್ಟೀಸ್ ಯಶವಂತ್ ವರ್ಮಾ ರನ್ನು ಹುದ್ದೆಯಿಂದ ವಜಾಗೊಳಿಸಿರುವುದಾಗಿ ದೆಹಲಿ ಹೈಕೋರ್ಟ್ ಚೀಫ್ ಜಸ್ಟೀಸ್ ಡಿ.ಕೆ.ಉಪಾಧ್ಯಾಯ ತಿಳಿಸಿದ್ದಾರೆ. ಹಣ ಪತ್ತೆಯಾದ ಬಳಿಕ ಜಸ್ಟೀಸ್ ವರ್ಮಾ ರನ್ನು ಅಲಹಾಬಾದ್ ಹೈಕೋರ್ಟ್ ಗೆ ವರ್ಗಾವಣೆ ಮಾಮಾಡಲಾಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಜಸ್ಟೀಸ್ ವರ್ಮಾ ರ ನಿವಾಸಕ್ಕೆ ಬೆಂಕಿ ಬಿದ್ದ ಸಂದರ್ಭದಲ್ಲಿ ಬೃಹತ್ ಮೊತ್ತ ಪತ್ತೆಯಾದ ಪ್ರಕರಣದ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ನ ಸಿಜೆಐ ಸಂಜೀವ್ ಖನ್ನಾ, ತ್ರಿಸದಸ್ಯ ಸಮಿತಿ ರಚಿಸಿದ್ದಾರೆ.
ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಯಾಗುವಂತೆ ಯಶವಂತ್ ವರ್ಮಾರನ್ನು ಜಸ್ಟೀಸ್ ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ದೆಹಲಿ ಹೈಕೋರ್ಟ್ ಬಿಡುಗಡೆ ಮಾಡಿರುವ ಪ್ರಕಟನೆಯಲ್ಲಿ ವಿವರಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಸ್ಟೀಸ್ ವರ್ಮಾ ವಿರುದ್ಧ ದೆಹಲಿ ಹೈಕೋರ್ಟ್ ಚೀಫ್ ಜಸ್ಟೀಸ್ ದೇವೇಂದ್ರ ಕುಮಾರ್ ಉಪಾಧ್ಯಾಯ ಆಂತರಿಕ ತನಿಖೆ ನಡೆಸಿದ್ದು, ವರದಿಯಲ್ಲಿ, ಈ ಪ್ರಕರಣದ ಬಗ್ಗೆ ವಿಸ್ತ್ರತ ತನಿಖೆ ನಡೆಸಬೇಕಾದ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಹಣ ಪತ್ತೆಯಾದ ಘಟನೆ ನಂತರ ಜಸ್ಟೀಸ್ ವರ್ಮಾ ರನ್ನು ಸುಪ್ರೀಂಕೋರ್ಟ್ ಸಿಜೆಐ ಖನ್ನಾರವರು, ಅಲಹಾಬಾದ್ ಹೈಕೋರ್ಟ್ ಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದರು. ಆದರೆ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾದ ಅನಂತರ ಆಂತರಿಕ ತನಿಖೆ ನಡೆಸಿದ್ದು, ಇದೀಗ ಜಸ್ಟೀಸ್ ಹುದ್ದೆಯಿಂದ ವರ್ಮಾ ರನ್ನು ವಜಾಗೊಳಿಸಿರುವುದಾಗಿ ವರದಿ ವಿವರಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj