ಮಂಗಳೂರಿನಲ್ಲಿ ಮಂಕಿ ಫಾಕ್ಸ್‌ಪತ್ತೆ: ವಿಮಾನ‌ ನಿಲ್ದಾಣದಲ್ಲಿ ಕಟ್ಟುನಿಟ್ಟಿನ ನಿಗಾ - Mahanayaka

ಮಂಗಳೂರಿನಲ್ಲಿ ಮಂಕಿ ಫಾಕ್ಸ್‌ಪತ್ತೆ: ವಿಮಾನ‌ ನಿಲ್ದಾಣದಲ್ಲಿ ಕಟ್ಟುನಿಟ್ಟಿನ ನಿಗಾ

monkeypox
19/07/2022

ಮಂಗಳೂರು: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಕನೊಬ್ಬ ಮಂಗನ ಕಾಯಿಲೆಗೆ ತುತ್ತಾಗಿರುವುದು ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ, ಜಿಲ್ಲಾ ಆರೋಗ್ಯ ಅಧಿಕಾರಿಗಳು ನೀಡಿದ ಎಸ್‌ ಒಪಿ ಪ್ರಕಾರ ವಿಮಾನ ನಿಲ್ದಾಣವು ಎಲ್ಲಾ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ತನ್ನ ಸ್ಕ್ರೀನಿಂಗ್ ಕಾರ್ಯವಿಧಾನಗಳನ್ನು ಬಲಪಡಿಸಿದೆ.

ಮಂಕಿಪಾಕ್ಸ್ ಪತ್ತೆಯಾಗಿರುವ  ಸ್ಥಳೀಯ ವಲಯಗಳಿಗೆ ಪ್ರಯಾಣಿಸಿರುವ ಪ್ರಯಾಣಿಕರ ಮೇಲೆ ಮತ್ತು ಮಂಕಿ ಪಾಕ್ಸ್ ಪತ್ತೆಯಾಗಿರುವ ಪ್ರದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗಿದೆ.


Provided by

ಸಂಭವನೀಯ ಪ್ರಕರಣಗಳನ್ನು ಪತ್ತೆಹಚ್ಚಲು ಪ್ರಯಾಣಿಕರ ಥರ್ಮಲ್ ಸ್ಕ್ರೀನಿಂಗ್ ಅನ್ನು ಮುಂದುವರಿಸಲಾಗಿದೆ.

ವಿಮಾನ ನಿಲ್ದಾಣವು ಮಂಕಿಪಾಕ್ಸ್‌ಗೆ ಸಂಬಂಧಿಸಿದ ಎಲ್ಲಾ ಸಹಭಾಗಿಗಳಿಗೆ ಜಾಗೃತಿ ಮೂಡಿಸಲಾಗಿದೆ ಎಂದು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ‌ ನಿಲ್ದಾಣದ ಪ್ರಕಟನೆ‌ ತಿಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ