ಹೊಸ ಲವರ್ ಜೊತೆಗೆ ಸೇರಿ ಮಾಜಿ ಲವರ್ ನನ್ನು ಕೊಂದ ಪ್ರೇಯಸಿ: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

ಮಹಿಳೆಯೊಬ್ಬಳು ತನ್ನ ಹೊಸ ಲವರ್ ಜೊತೆಗೆ ಸೇರಿ ತನ್ನ ಮಾಜಿ ಪ್ರಿಯಕರನನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಹೋಳಿಯ ರಾತ್ರಿ ಔಸನ್‌ಗಂಜ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಕೆಲವು ದಿನಗಳ ನಂತರ ಬಂಧಿಸಲಾಗಿದೆ.
ಪೊಲೀಸ್ ತನಿಖೆಯ ಪ್ರಕಾರ, ಸಂತ್ರಸ್ತನನ್ನು ದಿಲ್ಜಿತ್ ಎಂದು ಗುರುತಿಸಲಾಗಿದ್ದು, ಮದುವೆ ಮತ್ತು ಇತರ ಕಾರ್ಯಕ್ರಮಗಳಿಗೆ ಅಲಂಕಾರ ಕೆಲಸ ಮಾಡುತ್ತಿದ್ದ. ಹೋಳಿ ಹಬ್ಬದ ರಾತ್ರಿ 11 ಗಂಟೆ ಸುಮಾರಿಗೆ ಆತ ತನ್ನ ಮನೆಯ ಹೊರಗೆ ನಿಂತು ತನ್ನ ಮಾಜಿ ಗೆಳತಿಯೊಂದಿಗೆ ಮಾತನಾಡುತ್ತಿದ್ದ.
ಆ ಸಮಯದಲ್ಲಿ ಹೆಲ್ಮೆಟ್ ಧರಿಸಿದ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ಬೈಕಿನಿಂದ ದಿಲ್ಜಿತ್ ಎದೆಗೆ ಗುಂಡು ಹಾರಿಸಿದ್ದಾನೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಿಲ್ಜಿತ್ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳಲ್ಲಿ ಆರೋಪಿ, ಟಿವಿಎಸ್ ಸ್ಪ್ಲೆಂಡರ್ ಬೈಕಲ್ಲಿ ಕಪ್ಪು ಹೆಲ್ಮೆಟ್ ಹಾಕಿ ಸ್ಕೂಟರ್ ನಲ್ಲಿದ್ದ ವ್ಯಕ್ತಿಯನ್ನು ಬೆನ್ನಟ್ಟುತ್ತಿರುವುದನ್ನು ಕಾಣಬಹುದು. ಬೈಕಿನಲ್ಲಿ ಹಿಂಬಾಲಿಸುತ್ತಿದ್ದ ದಿಲ್ಜೀತ್ ಕಡೆಗೆ ಆರೋಪಿ ಬಂದೂಕನ್ನು ತೋರಿಸುತ್ತಿದ್ದ. ನಂತರ ಅವನು ಅವನ ಎದೆಗೆ ಗುಂಡು ಹಾರಿಸಿದ್ದಾನೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj