ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರಕ್ಕೆ ಹೆಚ್ಚಿನ ಭದ್ರತಾ ಪಡೆ ರವಾನೆ: ಕರ್ನಾಟಕ ಕಾರ್ಯಕ್ರಮ ರದ್ದುಗೊಳಿಸಿದ ಅಮಿತ್ ಶಾ

ಗುವಾಹಟಿ: ಮಣಿಪುರ ಹಿಂಸಾಚಾರದಿಂದಾಗಿ ತತ್ತರಿಸಿದೆ. ಈಗಾಗಲೇ ಹೆಚ್ಚಿಸಲು ಭಾರತೀಯ ವಾಯುಪಡೆ ಅಸ್ಸಾಂ ವಾಯುನೆಲೆಯಿಂದ ನಿರಂತರವಾಗಿ ಸೇನಾ ತುಕಡಿಯನ್ನು ರವಾನಿಸುತ್ತಿದೆ. ಇನ್ನೊಂದೆಡೆಯಲ್ಲಿ ಕೇಂದ್ರ ಸರ್ಕಾರ 355 ವಿಧಿ ಜಾರಿ ಮೂಲಕ ಬಿಗಿ ಭದ್ರತೆಗೆ ಕ್ರಮ ಕೈಗೊಂಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕ ಚುನಾವಣಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದು, ಮಣಿಪುರದಲ್ಲಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.
ಮಣಿಪುರದಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಗುಪ್ತಚರ) ಅಶುತೋಷ್ ಸಿನ್ಹಾ ಎಲ್ಲಾ ಕಾರ್ಯಾಚರಣೆಗಳ ಕಮಾಂಡರ್ ಆಗಿ ರಾಜ್ಯ ಸರ್ಕಾರ ನೇಮಿಸಿದೆ. ಅವರು ಭದ್ರತಾ ಸಲಹೆಗಾರರಾಗಿ ನೇಮಕಗೊಂಡಿರುವ ಮಾಜಿ ಸಿಆರ್ಪಿಎಫ್ ಮುಖ್ಯಸ್ಥ ಕುಲದೀಪ್ ಸಿಂಗ್ ಅವರಿಗೆ ವರದಿ ನೀಡುತ್ತಾರೆ.
ಈಗ ಜಾರಿಯಾಗಿರುವ 355 ನೇ ವಿಧಿಯು ಆಂತರಿಕ ಅಡಚಣೆಗಳು ಮತ್ತು ಬಾಹ್ಯ ಆಕ್ರಮಣಗಳ ವಿರುದ್ಧ ರಾಜ್ಯವನ್ನು ರಕ್ಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಕೇಂದ್ರಕ್ಕೆ ಅಧಿಕಾರ ನೀಡುತ್ತದೆ.
ಇನ್ನೂ ರಾಜ್ಯದ ರಾಜಧಾನಿ ಇಂಫಾಲ್ ನಲ್ಲಿ ಗುರುವಾರ ದುಷ್ಕರ್ಮಿಗಳು ಬಿಜೆಪಿ ಶಾಸಕ ವುಂಗ್ಜಾಗಿನ್ ವಾಲ್ಟೆ ಅವರ ಮೇಲೆ ದಾಳಿ ನಡೆಸಿದ್ದು, ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಶುಕ್ರವಾರ ದೆಹಲಿಗೆ ಕರೆದೊಯ್ಯಲಾಗಿದೆ.
ಮಣಿಪುರಕ್ಕೆ ಪ್ರಯಾಣಿಸುವ ಎರಡು ರೈಲುಗಳನ್ನು ಅಸ್ಸಾಂನಲ್ಲಿ ರೈಲ್ವೆ ಅಧಿಕಾರಿಗಳು ಅಲ್ಪಾವಧಿಗೆ ಸ್ಥಗಿತಗೊಳಿಸಿದ್ದಾರೆ. ಶುಕ್ರವಾರ ಕೆಲವು ಕಡೆ ಹಿಂಸಾಚಾರದ ಘಟನೆಗಳು ನಡೆದಿವೆ ಆದರೆ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಸೇನೆ ತಿಳಿಸಿದೆ. ರಾಜ್ಯ ಸರ್ಕಾರವು ಈಗಾಗಲೇ ತೀವ್ರ ಪ್ರಕರಣಗಳಲ್ಲಿ ಕಂಡಲ್ಲಿ ಗುಂಡು ಆದೇಶ ಹೊರಡಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw