ಮಂಗಳೂರಿನಲ್ಲಿ 1,725 ಕೆ.ಜಿ. ಅಪಾಯಕಾರಿ ಸ್ಫೋಟಕ ಪತ್ತೆ! | ಆರೋಪಿ ಅರೆಸ್ಟ್
ಮಂಗಳೂರು: ನಗರದ ಬಂದರ್ ನ ಗಾಂಧಿ ಸನ್ಸ್ ಕಟ್ಟಡದ ಕೊಠಡಿಯೊಂದರಲ್ಲಿ ಅಕ್ರಮವಾಗಿ 1,725 ಕೆ.ಜಿ.ಗೂ ಅಧಿಕ ಅಪಾಯಕಾರಿ ಸ್ಫೋಟಕ ದಾಸ್ತಾನು ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
50 ವರ್ಷ ವಯಸ್ಸಿನ ಆನಂದ ಗಟ್ಟಿ ಬಂಧಿತ ವ್ಯಕ್ತಿಯಾಗಿದ್ದು, ಆರೋಪಿಯಿಂದ 400 ಕೆ.ಜಿ. ಸಲ್ಫರ್ ಪೌಡರ್, 350 ಕೆ.ಜಿ. ಪೊಟ್ಯಾಷಿಯಂ ನೈಟ್ರೇಟ್, 50 ಕೆ.ಜಿ. ಬ್ಯಾರಿಯಂ ನೈಟ್ರೇಟ್, 395 ಕೆ.ಜಿ. ಪೊಟ್ಯಾಷಿಯಂ ಕ್ಲೊರೈಟ್, 260 ಕೆ.ಜಿ ವಿವಿಧ ಅಲೂಮಿನಿಯಂ ಪೌಡರ್, 30 ಕೆ.ಜಿ. ಲೀಡ್ ಬಾಲ್ಸ್, 240 ಕೆ.ಜಿ.ಚಾರ್ಕೋಲ್, 100 ಏರ್ ರೈಲ್ ಗಳನ್ನು ಒಳಗೊಂಡ 140 ಪಿಲೆಟ್ಸ್ ಪ್ಯಾಕೇಟ್, 100 ಏರ್ ರೈಲ್ ಗಳನ್ನೊಳಗೊಂಡ 21 ಪಿಲೇಟ್ಸ್ ಪ್ಯಾಕೇಟ್ ಗಳನ್ನು ವಶಕ್ಕೆ ಪಡೆಯಲಾಗಿದ್ದು, ಒಟ್ಟು 1500 ಕೆ.ಜಿ. ಸ್ಫೋಟಕವನ್ನು ಪಡಿಸಿಕೊಳ್ಳಲಾಗಿದೆ.
ವಾಣಿಜ್ಯ ಮತ್ತು ವಸತಿ ಸಂಕೀರ್ಣಗಳಿರುವ ಕಟ್ಟಡದ ಕೊಠಡಿಯೊಂದರಲ್ಲಿ ಈ ಭಾರೀ ಪ್ರಮಾಣದ ಸ್ಫೋಟಕಗಳನ್ನು ಅಕ್ರಮವಾಗಿ ದಾಸ್ತಾನಿರಿಸಲಾಗಿತ್ತು ಎಂದು ತಿಳಿದು ಬಂದಿದೆ. ಆರೋಪಿಗೆ ಇಷ್ಟೊಂದು ದೊಡ್ಡ ಪ್ರಮಾಣದ ಸ್ಫೋಟಕ ಎಲ್ಲಿಂದ ಸಿಕ್ಕಿದೆ? ಎನ್ನುವುದು ತಿಳಿದು ಬಂದಿಲ್ಲ. ಸ್ಫೋಟಕ ಸಂಗ್ರಹಿಸಿಟ್ಟಿರುವ ಉದ್ದೇಶಗಳೇನು ಎನ್ನುವುದೂ ತಿಳಿದು ಬಂದಿಲ್ಲ. ಈತನಿಗೆ ದೊಡ್ಡ ಕೈಗಳ ಜೊತೆಗೆ ನಂಟಿದೆಯೇ ಎನ್ನುವ ಅನುಮಾನಗಳು ಸದ್ಯ ಕೇಳಿ ಬಂದಿದೆ.
ಇನ್ನಷ್ಟು ಸುದ್ದಿಗಳು…
ಅಫ್ಘಾನ್ ಬಿಕ್ಕಟ್ಟು: ವಿಮಾನ ನಿಲ್ದಾಣದಲ್ಲಿ ಯು.ಎಸ್. ಅಧಿಕಾರಿಗಳ ಗುಂಡೇಟಿಗೆ ಐವರು ಬಲಿ
ಅಫ್ಘಾನ್ ಬಿಕ್ಕಟ್ಟು: ವಿಮಾನ ನಿಲ್ದಾಣದಲ್ಲಿ ಯು.ಎಸ್. ಅಧಿಕಾರಿಗಳ ಗುಂಡೇಟಿಗೆ ಐವರು ಬಲಿ
ಗಲಭೆ ಸೃಷ್ಟಿಸಲು ಮುಂದಾದರೆ, ಸಂವಿಧಾನ ಬದ್ಧವಾಗಿ ತಡೆಯಲು ಸಿದ್ಧ | ಸಂಘಪರಿವಾರಕ್ಕೆ ಪಿಎಫ್ ಐ ತಿರುಗೇಟು
ವೀರ ಸಾರ್ವರ್ಕರ್ ರಥಯಾತ್ರೆ ನಡೆಸುತ್ತೇವೆ ತಾಕತ್ ಇದ್ದರೆ ತಡೆಯಿರಿ | ಎಸ್ ಡಿಪಿಐಗೆ ಹಿಂದುತ್ವ ಸಂಘಟನೆಗಳ ಸವಾಲು
ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸದೊಳಗೆ ಮೊಬೈಲ್ ಬಳಕೆ ನಿಷೇಧ | ಕಾರಣ ಏನು ಗೊತ್ತಾ?




























