ವಿವಿಧ ಸರ್ಕಾರಿ ಇಲಾಖೆಗಳಲ್ಲಿ 22 ಸಾವಿರಕ್ಕೂ ಹೆಚ್ಚು ಹುದ್ದೆಗಳು: ಅರ್ಜಿ ಸಲ್ಲಿಸಲು ಉಳಿದಿವೆ ಕೆಲವೇ ದಿನಗಳು

ಇತ್ತೀಚಿಗೆ ವಿವಿಧ ಇಲಾಖೆಗಳು ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿತ್ತು. UPSC, SBI ಬ್ಯಾಂಕ್, ಅಂಚೆ ಇಲಾಖೆ ಹಾಗೂ ಹೈಕೋರ್ಟ್ ಈ ಇಲಾಖೆಗಳು ಹಲವು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ವಿವರ ಇಲ್ಲಿದೆ..
ಯಾವ ಯಾವ ಇಲಾಖೆಗಳು ಎಷ್ಟು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿವೆ?
* ಕೇಂದ್ರ ಲೋಕಸೇವಾ ಆಯೋಗವು ನಾಗರೀಕ ಸೇವಾ ಹುದ್ದೆಗಳಿಗೆ ಅರ್ಜಿ ಅಹ್ವಾನಿಸಿದೆ (IAS, IPS, IFS etc) — 979+150 ಹುದ್ದೆಗಳು
* ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ.
* ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 50 ಕ್ಕಿಂತಲೂ ಹೆಚ್ಚು ಸ್ಪೆಷಲಿಸ್ಟ್ ಕೆಡರ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ
* ಅಂಚೆ ಇಲಾಖೆಯ 21,413 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
* ಬೆಂಗಳೂರಿನಲ್ಲಿರುವ ರಾಜ್ಯದ ಹೈಕೋರ್ಟ್ ನಲ್ಲಿ 158 ಹುದ್ದೆಗಳ ಭರ್ತಿ
ಇಲಾಖಾವಾರು ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :
* UPSC ಹುದ್ದೆಗಳಿಗೆ ಅರ್ಜಿ ಸಲ್ಲಿಸಲು — ಫೆಬ್ರವರಿ 18, 2025
* SC, ST ವರ್ಗದ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಉಚಿತ ತರಬೇತಿಗೆ — ಫೆಬ್ರವರಿ 20, 2025
* ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿಗೆ ಕೊನೆಯ ದಿನಾಂಕ — ಫೆಬ್ರವರಿ 24, 225
* ಅಂಚೆ ಇಲಾಖೆಯ ನೇಮಕಾತಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮಾರ್ಚ್ 03, 2025
* ಹೈ ಕೋರ್ಟ್ ನೇಮಕಾತಿಗೆ ಕೊನೆಯ ದಿನಾಂಕ — ಮಾರ್ಚ್ 12, 2025
ಈ ಎಲ್ಲಾ ಇಲಾಖೆಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ನೀವು ಬಯಸಿದ್ದಲ್ಲಿ, ಮೊದಲು ಸಂಬಂಧಪಟ್ಟ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಹತೆಗಳನ್ನು ತಿಳಿದುಕೊಂಡು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿರಿ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: