ದೇವರ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಭಕ್ತರು ವಾಂತಿ, ಭೇದಿಯಿಂದ ಅಸ್ವಸ್ಥ! - Mahanayaka

ದೇವರ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಭಕ್ತರು ವಾಂತಿ, ಭೇದಿಯಿಂದ ಅಸ್ವಸ್ಥ!

pandavapura
03/03/2025

ಮಂಡ್ಯ: ದೇವರ ಪ್ರಸಾದ ಸೇವಿಸಿದ ಭಕ್ತರು ವಾಂತಿ ಭೇದಿಯಿಂದ ಅಸ್ವಸ್ಥರಾದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ನರಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ಚನ್ನಬೀರೇಶ್ವರ ಹಬ್ಬದ ಹಿನ್ನೆಲೆ ಪ್ರಸಾದ ವಿತರಿಸಲಾಗಿತ್ತು. ಇದರ ಬೆನ್ನಲ್ಲೇ ಇಂದು 50ಕ್ಕೂ ಹೆಚ್ಚು ಭಕ್ತರಿಗೆ ವಾಂತಿ ಭೇದಿಯಾಗಿದ್ದು, ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಸ್ವಸ್ಥಗೊಂಡವರಿಗೆ ಪಾಂಡವಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಯಾವುದೇ ಭಕ್ತರಿಗೂ ಪ್ರಾಣಾಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ