ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ: ಅರೆಸ್ಟ್ ವಾರಂಟ್ ಜಾರಿ

ಬೆಂಗಳೂರು: ಲೈಂಗಿಕ ಕಿರುಕುಳದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಹೆಚ್ಚಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯ ಅರೆಸ್ಟ್ ವಾರೆಂಟ್ ಹೊರಡಿಸಿದೆ. ಲೈಂಗಿಕ ಕಿರುಕುಳ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ಎಸ್ ಐಟಿ ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಬಂಧನ ವಾರಂಟ್ ಹೊರಡಿಸಲಾಗಿದೆ.
ರೇವಣ್ಣ ವಿರುದ್ಧ ಈಗಾಗಲೇ ಹೊರಡಿಸಲಾಗಿರುವ ಲುಕ್ ಔಟ್ ನೋಟಿಸ್ ಮತ್ತು ಬ್ಲೂ ಕಾರ್ನರ್ ನೋಟಿಸ್ ಗಳ ಬಗ್ಗೆಯೂ ಎಸ್ ಐಟಿ ನ್ಯಾಯಾಲಯಕ್ಕೆ ತಿಳಿಸಿದ್ದು, ಮೂಲ ಚಾರ್ಜ್ ಶೀಟ್ ಸಲ್ಲಿಸುವ ಅಗತ್ಯವಿಲ್ಲ ಎಂದು ಹೇಳಿದೆ.
ಎಸ್ ಐಟಿ ಸಲ್ಲಿಕೆ ಆಧಾರದ ಮೇಲೆ ನ್ಯಾಯಾಲಯ ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068