ಮೋಟಮ್ಮ ಪುತ್ರಿಗೆ ಟಿಕೆಟ್ ಕೊಡಬಾರದು: ಕಾಂಗ್ರೆಸ್ ನಾಯಕರ ರಹಸ್ಯ ಸಭೆಯ ವಿಡಿಯೋ ಲೀಕ್!
ಮೂಡಿಗೆರೆ: ಮುಂಬರುವ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ಎಲ್ಲ ಪಕ್ಷಗಳಲ್ಲಿ ಹಲವಾರು ಅಭ್ಯರ್ಥಿಗಳು ಕ್ಷೇತ್ರದಾದಂತ ಬಿರುಸಿನ ಪ್ರವಾಸ ಕೈಗೊಂಡಿದ್ದು, ಮಾಜಿ ಸಚಿವೆ ಮೊಟ್ಟಮ್ಮನವರ ಪುತ್ರಿ ಸಹ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಹೈಕಮಾಂಡ್ ಮಟ್ಟದಲ್ಲಿ ಪ್ರಭಾವ ಹೊಂದಿರುವ ಮೋಟಮ್ಮ ತಮ್ಮ ಪುತ್ರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವ ಪ್ರಯತ್ನದಲ್ಲಿದ್ದಾರೆ. ಈಗಾಗಲೇ ಕ್ಷೇತ್ರದ್ಯಾಂತ ಸಂಚಾರ ನಡೆಸಿ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ.
ಈ ನಡುವೆ ಮೂಡಿಗೆರೆ ಕಾಂಗ್ರೆಸ್ ನಲ್ಲಿ ಬೆಳವಣಿಗೆಯೊಂದು ನಡೆದಿದ್ದು, ಮೂಡಿಗೆರೆಯ ಹಿರಿಯ ಕಾಂಗ್ರೆಸ್ ಮುಖಂಡರೊಬ್ಬರ ಮನೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ನ ಪ್ರಮುಖರು ರಹಸ್ಯ ಸಭೆ ನಡೆಸಿದ್ದು, ಮೋಟಮ್ಮ ಪುತ್ರಿ ನಯನ ಮೋಟಮ್ಮಗೆ ಟಿಕೆಟ್ ನೀಡಬಾರದು ಎಂದು ಪಕ್ಷಕ್ಕೆ ಒತ್ತಡ ಹಾಕುವ ತಂತ್ರವನ್ನು ಹೆಣೆಯಲಾಗಿದೆ.
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿದ್ದು, ಕಾಂಗ್ರೆಸ್ ನೊಳಗಿನ ಒಳ ಜಗಳ ಈ ಮೂಲಕ ಬಯಲಾಗಿದೆ. ಈ ವಿಡಿಯೋ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka