ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು

05/03/2025
ಬೆಳಗಾವಿ: ಮೂವರು ಮಕ್ಕಳೊಂದಿಗೆ ತಾಯಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಬಳಿ ನಡೆದಿದೆ.
ತಾಯಿ ಶಾರದಾ (32), ಮಕ್ಕಳಾದ ಅಮೃತಾ, ಆದರ್ಶ ಹಾಗೂ ಅನುಷ್ಕಾ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮಕ್ಕಳೊಂದಿಗೆ ತಾಯಿ ಕೃಷ್ಣಾ ನದಿಗೆ ಹಾರುವುದನ್ನು ಕಂಡು ಸ್ಥಳೀಯರು ನೀರಿನಲ್ಲಿ ಮುಳುಗುತ್ತಿದ್ದ ಅನುಷ್ಕಾಳನ್ನು ರಕ್ಷಿಸಿದರು. ತಕ್ಷಣವೇ ಆಕೆಯನ್ನು ರಾಯಬಾಗ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಆಕೆ ಮೃತಪಟ್ಟಿದ್ದಾಳೆ.
ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಪತಿ ಅಶೋಕ್ ಕಿರುಕುಳದಿಂದ ಬೇಸತ್ತು ಶಾರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: