ಸಂಕ್ರಾಂತಿ ಹಬ್ಬದೂಟ ನೀಡಲು ಮಗಳ ಮನೆಗೆ ಬಂದಿದ್ದ ಅತ್ತೆಯನ್ನೇ ಹತ್ಯೆ ಮಾಡಿದ ಅಳಿಯ!
ಬೆಳಗಾವಿ: ಸಂಕ್ರಾಂತಿ ಹಬ್ಬದ ಪ್ರಯಕ್ತ ಮಗಳಿಗೆ ಬುತ್ತಿ ಕಟ್ಟಿಕೊಂಡು ಕೊಡಲು ಬಂದಿದ್ದ ಅತ್ತೆಯನ್ನು ಅಳಿಯನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ನಗರದ ಮಲಪ್ರಭಾ ನಗರದಲ್ಲಿ ನಡೆದಿದೆ.
ಬೆಳಗಾವಿ ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪಡುಮುಖೆ(44) ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಮಲಪ್ರಭಾ ನಗರದ ಶುಭಂ ದತ್ತಾ ಬಿರ್ಜೆ(24) ತನ್ನ ಅತ್ತೆಯನ್ನೇ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ.
ಆರೋಪಿ ಶುಭಂ ಬಿರ್ಜೆ ಮತ್ತು ಛಾಯಾ ಮಲಪ್ರಭಾ ನಗರದ ರೈತರ ಗಲ್ಲಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆ ಮಗಳಿಗೆ ಸಂಕ್ರಾಂತಿ ಹಬ್ಬದೂಟ ಕೊಡಲು ತಾಯಿಯು ಮಗಳ ಮನೆಗೆ ಬಂದಿದ್ದರು.
ಆದರೆ ಅತ್ತೆ ತನ್ನ ಮನೆಗೆ ಬಂದಿರುವುದನ್ನು ಸಹಿಸದ ಅಳಿಯ ಖ್ಯಾತೆ ತೆಗೆದು ಜಗಳ ಆರಂಭಿಸಿದ್ದು, ಮಾತಿಗೆ ಮಾತು ಬೆಳೆದಾಗ ಅಳಿಯ ಚಾಕುವಿನಿಂದ ಅತ್ತೆಯ ತೊಡೆಯ ಭಾಗಕ್ಕೆ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ತಕ್ಷಣವೇ ರೇಣುಕಾ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ತೀವ್ರ ರಕ್ತಸ್ರಾವದಿಂದ ರೇಣುಕಾ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್, ಸಿಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: