ಮಗುವಿಗೆ ಎದೆಹಾಲು ಕುಡಿಸುತ್ತಿದ್ದ ತಾಯಿ ಕುಸಿದು ಬಿದ್ದು ಸಾವು
ಕೋಟ: ಮಗುವಿಗೆ ಎದೆಹಾಲು ಕುಡಿಸುತ್ತಿದ್ದ ತಾಯಿ ಕುಸಿದು ಬಿದ್ದು ಮೃತಪಟ್ಟ ಫೆ.18ರಂದು ಬೆಳಗ್ಗೆ ನಡೆದಿದೆ.
ಗುಣವತಿ(39) ಮೃತ ಮಹಿಳೆ. ಡಿ.23ರಂದು ಉಡುಪಿಯ ತಾಯಿ ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಆಗಿ ಗಂಡು ಮಗುವಿನ ಜನನ ನೀಡಿದ್ದ ಗುಣವತಿ, 21 ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಗೆ ಬಂದಿದ್ದರು.ಸುಮಾರು ಒಂದು ವಾರದ ಹಿಂದೆ ವಾಂತಿ ಮತ್ತು ಬೇಧಿ ಕಾಣಿಸಿಕೊಂಡಿದ್ದ ಇವರು, ಮಗುವಿಗೆ ಹಾಲು ಕುಡಿಸುತ್ತಿರುವಾಗ ನಿತ್ರಾಣಗೊಂಡು ಕುಸಿದು ಬಿದ್ದರೆನ್ನಲಾಗಿದೆ.
ತೀವ್ರವಾಗಿ ಅಸ್ವಸ್ಥಗೊಂಡ ಇವರು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw