ಕಾರ್ಮಿಕರ ಬಗ್ಗೆ ವಿವಾದಾತ್ಮಕ ಹೇಳಿಕೆ: ಮಧ್ಯಪ್ರದೇಶದಲ್ಲಿ ಮುಸ್ಲಿಂ ಧರ್ಮಗುರು ಬಂಧನ
ಮೊನ್ನೆ ನೈರ್ಮಲ್ಯ ಕಾರ್ಮಿಕರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ವ್ಯಕ್ತಿಯನ್ನು ಮಧ್ಯಪ್ರದೇಶದ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಹಫೀಜ್ ಆಗಿದ್ದು ಅವರನ್ನು ಮೌಲಾನಾ ಶದಬ್ ಖಾನ್ ಎಂದು ಗುರುತಿಸಲಾಗಿದೆ. ಸಿಆರ್ ಪಿಸಿ ಸೆಕ್ಷನ್ 151 ರ ಅಡಿಯಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಚಂದನ್ ನಗರ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಮನೀಷ್ ಮಿಶ್ರಾ ಹೇಳಿಕೆ ನೀಡಿದ್ದಾರೆ.
ಇದು ಮುನ್ನೆಚ್ಚರಿಕೆ ಕ್ರಮದ ಬಂಧನವಾಗಿದ್ದು, ದೇಶದ ಅತ್ಯಂತ ಸ್ವಚ್ಛ ನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಇಂದೋರ್ ನಲ್ಲಿ ಧಾರ್ಮಿಕ ಉಪನ್ಯಾಸವನ್ನು ಆಯೋಜಿಸಿದ್ದಾಗ ನೈರ್ಮಲ್ಯ ಕಾರ್ಮಿಕರ ಬಗ್ಗೆ ಈ ವ್ಯಕ್ತಿ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದೆ.
ಈ ವ್ಯಕ್ತಿಯ ಹೇಳಿಕೆಯ ವೀಡಿಯೋ ವೈರಲ್ ಆಗತೊಡಗಿದ್ದು, ಎಸ್ ಸಿ/ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಇಂದೋರ್ ಮಹಾನಗರ ಪಾಲಿಕೆಯ ವಾಲ್ಮೀಕಿ ಸಮಾಜ ಸಫಾಯಿ ಕರಮಚಾರಿ ಸಂಘದ ಉಪಾಧ್ಯಕ್ಷ ಸುಭಾಷ್ ಧೌಲಪುರೆ ಅವರ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಬಂಧನಕ್ಕೊಳಗಾಗಿರುವ ವ್ಯಕ್ತಿ ಖಾನ್ ಕ್ಷಮೆ ಕೋರಿದ್ದು, ವೈರಲ್ ಆಗಿರುವ ವೀಡಿಯೋ ಕಳೆದ ವರ್ಷ ಮೊಹರಂ ಅವಧಿಯಲ್ಲಿ ಚಿತ್ರೀಕರಣವಾಗಿದ್ದು ಎಂದು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BnbLYSQaXK1Hate4P0Bt3B
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw