ಕೊನೆಯ ಕ್ಷಣದಲ್ಲಿ ಬಿಜೆಪಿಗೆ ಶಾಕ್ ನೀಡಿದ ಸಂಸದೆ ಸುಮಲತಾ ಅಂಬರೀಷ್

ಮಂಡ್ಯ: ಬಿಜೆಪಿಗೆ ನನ್ನ ಬೆಂಬಲ ಎಂದು ಹೇಳಿದ್ದ ಮಂಡ್ಯದ ಸ್ವಾಭಿಮಾನಿ ಸಂಸದೆ ಸುಮಲತಾ ಅಂಬರೀಷ್ ಇದೀಗ ಮೇಲುಕೋಟೆ ಕ್ಷೇತ್ರದಲ್ಲಿ ಬಿಜೆಪಿಗೆ ಕೈಕೊಟ್ಟು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಸೂಚಿಸಿದ್ದಾರೆ.
ಇತ್ತೀಚೆಗೆ ಸುಮಲತಾ ಅವರು ಬಿಜೆಪಿಗೆ ಬೆಂಬಲ ಸೂಚಿಸಿದ್ದರು. ಆದರೆ ಇದೀಗ ಋಣಸಂದಾಯದ ಹೆಸರಿನಲ್ಲಿ ರೈತ ಸಂಘದ ಅಭ್ಯರ್ಥಿ ದರ್ಶನ್ ಪುಟ್ಟಯ್ಯನವರಿಗೆ ಬೆಂಬಲ ಘೋಷಣೆ ಮಾಡುವ ಮೂಲಕ ಬಿಜೆಪಿ ಅಭ್ಯರ್ಥಿ ಡಾ.ಇಂದ್ರೇಶ್ ಗೆ ಕೊನೆಯ ಕ್ಷಣದಲ್ಲಿ ಶಾಕ್ ನೀಡಿದ್ದಾರೆ.
ಮಂಡ್ಯದ 7 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಸುಮಲತಾ ಹೇಳಿದ್ದರು. ಆದರೆ ಇದೀಗ ಕೊನೆಯ ಕ್ಷಣದಲ್ಲಿ ಬಿಜೆಪಿಗೆ ಶಾಕ್ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw