ಮುಡಾ ಕೇಸ್: ಇಂದು ಲೋಕಾಯುಕ್ತ ಎದುರು ವಿಚಾರಣೆಗೆ ಹಾಜರಾಗಲಿರುವ ಸಿಎಂ ಸಿದ್ದರಾಮಯ್ಯ
06/11/2024
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಇಂದು ಲೋಕಾಯುಕ್ತ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವುದಾಗಿ ಸಿಎಂ ಸಿದ್ದರಾಮಯ್ಯ ಖುದ್ದು ತಿಳಿಸಿದ್ದಾರೆ.
ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದಾರೆ.
ಸಿಎಂ ವಿಚಾರಣೆ ಹಿನ್ನೆಲೆ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: