ಮುಧೋಳ ಫೈಲ್ಸ್ !: ಜೋಡಿ ಕೊಲೆ ಪ್ರಕರಣ ಮಾಸುವ ಮೊದಲೇ ದಲಿತ ಯುವಕನ ಮೇಲೆ ಮಾರಣಾಂತಿ ಹಲ್ಲೆ!
ವರದಿ: ಲವಿತ್ ಮೇತ್ರಿ, ಮುಧೋಳ
ಮುಧೋಳ: ತಾಲೂಕಿನ ಶಿರೋಳ ಗ್ರಾಮದಲ್ಲಿ ಕಳೆದ ಎರಡು ವರ್ಷಗಳ ಹಿಂದೆ ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿಗಳ ಜೋಡಿ ಕೊಲೆ ಪ್ರಕರಣ ಮಾಸುವ ಮುನ್ನವೇ, ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಶಿರೋಳ ಗ್ರಾಮದ ಮಾದಿಗ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರ ಮೇಲೆ ದೌರ್ಜನ್ಯ ನಡೆಸಿರುವ ಘಟನೆ ನಡೆದಿದೆ.
ಬಸವರಾಜರಾಮಪ್ಪಮೇತ್ರಿ (18) ದೌರ್ಜನ್ಯಕ್ಕೊಳಗಾಗಿರುವ ದಲಿತ ಯುವಕನಾಗಿದ್ದು, ಹಣ ಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವಕನನ್ನು ಗ್ರಾಮದ ಸವರ್ಣಿಯರ ವ್ಯಕ್ತಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವುದೇ ಅಲ್ಲದೇ ಥಳಿಸಿ ಚಿತ್ರ ಹಿಂಸೆ ನೀಡಿರುವ ಆರೋಪ ಕೇಳಿ ಬಂದಿದೆ.
ಯುವಕನನ್ನು ಬಿಟ್ಟು ಬಿಡುವಂತೆ ಕುಟುಂಬಸ್ಥರು ಪರಿಪರಿಯಾಗಿ ಬೇಡಿಕೊಂಡರೂ, ಕರುಣೆ ತೋರದೇ, ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು, ಯುವಕ ಪ್ರಜ್ಞೆ ತಪ್ಪಿ ಬಿದ್ದರೂ ಥಳಿಸುತ್ತಿದ್ದರು ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿದು ಸಮುದಾಯದ ಯುವಕರು ಜೊತೆ ಗೂಡಿ ಸ್ಥಳಕ್ಕೆ ಆಗಮಿಸಿದ ವೇಳೆ ಯುವಕನನ್ನು ಬಿಟ್ಟು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
ಸಂತ್ರಸ್ತ ಯುವಕನನ್ನು ಮುಧೋಳ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ತಕ್ಷಣವೇ ಆರೋಪಿಗಳನ್ನು ದಲಿತ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಬಂಧಿಸಿ, ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಭೀಮ್ ಆರ್ಮಿ ಮುಧೋಳ ತಾಲೂಕು ಘಟಕ ಒತ್ತಾಯಿಸಿದೆ. ದಲಿತರ ಮೇಲೆ ನಿರಂತರ ದೌರ್ಜನ್ಯ ನಡೆಯುತ್ತಿದ್ದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ದಲಿತ ದೌರ್ಜನ್ಯಗಳನ್ನು ತಡೆಯಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಚಿನ್ನ ಖರೀದಿಗೆ ಮುಗಿಬಿದ್ದ ಜನ: ಮತ್ತಷ್ಟು ಇಳಿಕೆಯಾಯ್ತು ಗೋಲ್ಡ್, ಸಿಲ್ವರ್ ರೇಟ್
ಕನ್ನಡ ಚಿತ್ರರಂಗ ನಟ, ನಿರ್ದೇಶಕ, ನಿರ್ಮಾಪಕ ಎಸ್.ನಾರಾಯಣ್ ರಾಜಕೀಯಕ್ಕೆ ಎಂಟ್ರಿ
ಸ್ನೇಹಿತನ ತಂಗಿ ಜತೆ ಫೋನ್ ನಲ್ಲಿ ಮಾತನಾಡುತ್ತಿದ್ದ ಯುವಕನ ದುರಂತ ಅಂತ್ಯ!
ದೆಹಲಿಯ ಹೊರಗೆ ಮೊದಲ ಬಾರಿಗೆ AAP ಸಿಎಂ; ಇಂದು ಪಂಜಾಬ್ ನಲ್ಲಿ ಭಗವಂತ್ ಮಾನ್ ಅಧಿಕಾರಕ್ಕೆ