ರಸ್ತೆ ದುರಸ್ತಿ ಮಾಡದೆ 12 ವರ್ಷ ಆಯ್ತು ಅಂತ ಪ್ರತಿಭಟಿಸಿದವರ ಬಂಧನ: ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಆಕ್ರೋಶ
ಮೂಡಿಗೆರೆ: ರಸ್ತೆ ದುರಸ್ತಿಗೆ ಆಗ್ರಹಿಸಿ ಶಾಸಕರ ಮನೆ ಮುಂದೆ ಧರಣಿ ನಡೆಸುತ್ತಿದ್ದ ಐವತ್ತಕ್ಕೂ ಹೆಚ್ಚು ರೈತರನ್ನ ಬಂಧಿಸಿರುವ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಅರಳಿಮರ, ಗಂಜಲಗೋಡು, ಹಳುವಳ್ಳಿ, ಮತ್ತಿಕೆರೆ ಸೇರಿದಂತೆ ಹತ್ತಾರು ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಗೆ ಆಗ್ರಹಿಸಿ ರೈತ ಸಂಘ ಕೆಲ್ಲೂರು ಗ್ರಾಮದಲ್ಲಿರುವ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮನೆ ಎದುರು ಪ್ರತಿಭಟನೆ ನಡೆಸುತ್ತಿದ್ದರು.
ಪೊಲೀಸರು ಮನವೊಲಿಸಿದರೂ ರೈತರ ಸಂಘದ ಸದಸ್ಯರು ಮಾತು ಕೇಳದ ಹಿನ್ನೆಲೆ ಪೊಲೀಸರು ಐವತ್ತಕ್ಕೂ ಹೆಚ್ಚು ರೈತರ ಸಂಘದ ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಅರಳಿಮರ, ಗಂಜಲಗೋಡು, ಹಳುವಳ್ಳಿ, ಮತ್ತಿಕೆರೆ ಗ್ರಾಮದ ರಸ್ತೆಯನ್ನ ದುರಸ್ತಿ ಮಾಡುವಂತೆ ಕಳೆದ ಏಳೆಂಟು ವರ್ಷಗಳಿಂದಲೂ ಮನವಿ ಮಾಡುತ್ತಿದ್ದರು. ಆದರೆ, ಶಾಸಕರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಹಾಗಾಗಿ, ರೈತ ಸಂಘದ ಸದಸ್ಯರು ಕೂಡಲೇ ರಸ್ತೆ ದುರಸ್ಥಿಗೆ ಆಗ್ರಹಿಸಿ ಶಾಸಕ ಮನೆ ಮುಂದೆ ಧರಣಿ ಮಾಡುತ್ತಿದ್ದರು. ಕಳೆದ ರಾತ್ರಿಯೂ ಶಾಸಕರ ಮನೆ ಮುಂದೆ ಧರಣಿ ಮಾಡಿದ್ದರು. ಇಂದು ಕೂಡ ಶಾಸಕರ ಮನೆ ಮುಂದೆ ಧರಣಿ ನಡೆಸುತ್ತಿದ್ದ ರೈತ ಸಂಘದ ಕಾರ್ಯಕರ್ತರನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದಾರೆ.
ಬಂಧನ ವೇಳೆ ರೈತರು ಶಾಸಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. 12 ವರ್ಷದಿಂದ ರಸ್ತೆ ದುರಸ್ತಿ ಮಾಡಿಸಿಲ್ಲ. ನೂರಾರು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಪ್ರತಿಭಟನೆ ನಡೆಸಿದರೆ ಅರೆಸ್ಟ್ ಮಾಡಿಸುತ್ತೀರಾ? ಎಂದು ಶಾಸಕರ ವಿರುದ್ಧ ಧಿಕ್ಕಾರ ಕೂಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka