ಮೂಡಿಗೆರೆ: ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ | ಅಭ್ಯರ್ಥಿಯ ಬದಲಾವಣೆಗೆ ಪಟ್ಟು ಹಿಡಿದ ಕಾರ್ಯಕರ್ತರು
ಮೂಡಿಗೆರೆ: ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. 120 ಪ್ಲಸ್ ಕನಸುಹೊತ್ತಿರೋ ಬಿಜೆಪಿ ಶತಯಾಗತಾಯ ಅಧಿಕಾರಕ್ಕಾಗಿ ಹಾತೊರೆಯುತ್ತಿದೆ. ಆದರೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಹಾಲಿ ಶಾಸಕರ ವಿರುದ್ಧ ರೆಬಲ್ ಆಗಿ ಪ್ರತ್ಯೇಕ ಬಂಡಾಯದ ಸಭೆ ನಡೆಸಿ ಶಾಸಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಮೂಡಿಗೆರೆ ನಗರದ ಪ್ರೀತಂ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸುತ್ತಿರೋ ಮುಖಂಡರು ಹಾಗೂ ಕಾರ್ಯಕರ್ತರು ಈ ಬಾರಿ ಕುಮಾರಸ್ವಾಮಿಗೆ ಟಿಕೆಟ್ ಬೇಡವೇ ಬೇಡ ಅಂತ ಬಹಿರಂಗ ಸಭೆ ನಡೆಸುತ್ತಿದ್ದಾರೆ. ಅವರು ಕಾರ್ಯಕರ್ತರನ್ನ ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ಬೂತ್ ಕಮಿಟಿ ಅಧ್ಯಕ್ಷರು, ಮಂಡಲ ಅಧ್ಯಕ್ಷರು ಹೋದಾಗಲು ನೀವು ಯಾರು ಎಂದು ಕೇಳುತ್ತಾರೆ. ಚುನಾವಣೆ ಸಮಯದಲ್ಲಿ ಹಣಕಾಸಿನ ನೆರವು ನೀಡಿದವರನ್ನೂ ನೀವು ಯಾರು ಎಂದು ಕೇಳುತ್ತಾರೆ. ಅವರು ಶಾಸಕರಾದರೆ ಬರೀ ಗುಂಪುಗಾರಿಕೆ ಮಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಳೆದ ಎಲೆಕ್ಷನ್ ನಲ್ಲಿ ಇನ್ಮುಂದೆ ಹಾಗೇ ಮಾಡುವುದಿಲ್ಲ ಎಂದು ಹೇಳಿ ಗೆದ್ದು ಮತ್ತೆ ಅದೇ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ, ಈ ಬಾರಿ ಅವರಿಗೆ ಟಿಕೆಟ್ ಬೇಡವೇ ಬೇಡ ಎಂದು 1000 ಕ್ಕೂ ಅಧಿಕ ಮುಖಂಡರು, ಕಾರ್ಯಕರ್ತರು ಕುಮಾರಸ್ವಾಮಿ ಹಠಾವೋ, ಬಿಜೆಪಿ ಬಚಾವೋ ಎಂದು ಸಭೆ ನಡೆಸುತ್ತಿದ್ದಾರೆ.
ಇಂದು ಮಧ್ಯಾಹ್ನ ಮೂಡಿಗೆರೆ ಆಗಮಿಸಲಿರುವ ವಿಜಯ ಸಂಕಲ್ಪ ಯಾತ್ರೆ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರ ಎದುರೇ ಸಾವಿರಾರು ಕಾರ್ಯಕರ್ತರು ಅವರಿಗೆ ಟಿಕೆಟ್ ಬೇಡ. ಅವರಿಗೆ ಕೊಟ್ಟರೆ ನಮ್ಮ ದಾರಿ ನಮಗೆ ಎಂದು ಹೇಳಲು ಸಿದ್ಧರಾಗಿದ್ದಾರೆ. ಆದರೆ, ಇಂದು ಬಿಜೆಪಿಯ ಆಂತರಿಕೆ ಬೇಗುದಿ ನಡು ರಸ್ತೆಯಲ್ಲಿ ಸ್ಫೋಟಗಳ್ಳುವ ಎಲ್ಲಾ ಲಕ್ಷಣಗಳು ದಟ್ಟವಾಗಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw