ಮುದ್ರಣಕ್ಕೆ ಬಳಸುವ ಕಚ್ಚಾ ಸಾಮಗ್ರಿಗಳ ಬೆಲೆ ಗಗನಕ್ಕೆ: ಮುದ್ರಣಾಲಯಗಳ ಮಾಲಕರ ಆತಂಕ! - Mahanayaka
11:30 AM Wednesday 5 - February 2025

ಮುದ್ರಣಕ್ಕೆ ಬಳಸುವ ಕಚ್ಚಾ ಸಾಮಗ್ರಿಗಳ ಬೆಲೆ ಗಗನಕ್ಕೆ: ಮುದ್ರಣಾಲಯಗಳ ಮಾಲಕರ ಆತಂಕ!

udupi
23/08/2022

ಉಡುಪಿ: ಮುದ್ರಣಕ್ಕೆ ಬಳಸುವ ಕಚ್ಚಾ ಸಾಮಗ್ರಿಗಳಾದ ಪೇಪರ್, ಇಂಕ್ ಬೆಲೆ ಗಗನಕ್ಕೆ ಏರುತ್ತಿದೆ. ಒಂದು ವರ್ಷದಿಂದ ಕಚ್ಛಾ ಸಾಮಗ್ರಿಗಳ ಬೆಲೆ ದುಪ್ಪಟ್ಟಾಗಿದೆ. ದಿನದಿಂದ ದಿನಕ್ಕೆ ದುಬಾರಿ ಆಗುತ್ತಿದೆ. ವಿದ್ಯುತ್ ದರವೂ ಹೆಚ್ಚಳವಾಗುತ್ತಿರುವುದರಿಂದ ಜಿಲ್ಲೆಯಾದ್ಯಂತ ಮುದ್ರಣಕ್ಕೆ ಏಕರೂಪ ದರ ನಿಗದಿಪಡಿಸಲಾಗುವುದು. ಶೇ.20ರಷ್ಟು ದರ ಹೆಚ್ಚಳ ಮಾಡುತ್ತೇವೆ ಎಂದು ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದ ಅಧ್ಯಕ್ಷ ಪ್ರಕಾಶ್ ಜಿ.ಕೊಡವೂರು, ಮಾಜಿ ಅಧ್ಯಕ್ಷ ಯು.ಮೋಹನ್ ಉಪಾಧ್ಯ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.

ದರ ಹೆಚ್ಚಳದಿಂದ ಸರಕಾರದ ಟೆಂಡರ್‌ ಗಳನ್ನೂ ಮಾಡಲು, ವೇತನ ನೀಡಲು ಸಮಸ್ಯೆಯಾಗುತ್ತಿದೆ ಎಂದರು.

ಪದ ಪ್ರಧಾನ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದ ಪದಪ್ರಧಾನ ಸಮಾರಂಭ ಆ.23ರಂದು ಸಂಜೆ 6ಕ್ಕೆ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ. ಹಿರಿಯ ಕಾರ್ಮಿಕರಿಗೆ ಸಮ್ಮಾನ ಹಾಗೂ ಪ್ರತಿಭಾ ಪುರಸ್ಕಾರ ನಡೆಯಲಿದೆ. ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಆರ್ಶೀವರ್ಚನ ನೀಡಲಿದ್ದಾರೆ ಎಂದು ಇದೇ ವೇಳೆ ಅವರು ತಿಳಿಸಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಕುಮಾರ್ ಬಿ.ಆರ್., ಉದ್ಯಮಿ ದಶರಥ್ ಸಿಂಗ್ ಚೌಹಾಣ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ನಿಕಟಪೂರ್ವ ಅಧ್ಯಕ್ಷ ಎಂ.ಮಹೇಶ್ ಕುಮಾರ್, ರಾಜ್ಯ ಸಹ ಸಂಚಾಲಕ ಅಶೋಕ್ ಶೆಟ್ಟಿ, ಮಾಜಿ ಅಧ್ಯಕ್ಷ ರಮೇಶ್ ತಿಂಗಳಾಯ, ಕಾರ್ಯದರ್ಶಿ ಶರೀಫ್, ಕೋಶಾಧಿಕಾರಿ ಶರೀಫ್, ಕೋಶಾಧಿಕಾರಿ ರವಿ ಬೆಳಂಜೆ ಉಪಸ್ಥಿತರಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ